ಕನಕಗಿರಿ: ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಹಾಗೂ ಸಂಶೋಧನಾ ಘಟಕದ ವತಿಯಿಂದ ‘ಸಂಶೋಧನಾ ವಿಧಾನದಲ್ಲಿ ಹೊಸ ಪ್ರವೃತ್ತಿಗಳು’ ವಿಷಯದ ಮೇಲೆ ಮೇ 21ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದ್ದು, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕಿ ಪ್ರೊ.ಶೋಭಾ ಜಿ. ಉದ್ಘಾಟಿಸುವರು. ಕಾಲೇಜು ಶಿಕ್ಷಣ ಇಲಾಖೆಯ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕ ಪ್ರೊ.ಗೊಳ್ಳೆ ಶಿವಶರಣ ಬಿ., ಕೊಪ್ಪಳ ವಿವಿ ಸಿಂಡಿಕೇಟ್ ಸದಸ್ಯ ಕೆ.ಸಿ. ಕುಲಕರ್ಣಿ, ಭೂದಾನಿ ಬಸವರಾಜ ಗುಗ್ಗಳಶೆಟ್ರ ಭಾಗವಹಿಸುವರು. ಪ್ರಭಾರ ಪ್ರಾಂಶುಪಾಲ ಬಜರಂಗಬಲಿ ಅಧ್ಯಕ್ಷತೆ ವಹಿಸುವರು. ‘ಸಂಶೋಧನೆ ಯಲ್ಲಿ ಹೊಸ ಪ್ರವೃತ್ತಿಗಳು’ ವಿಷಯದ ಕುರಿತ ಮೊದಲ ಗೋಷ್ಠಿಯಲ್ಲಿ ನೆಲ್ಲೂರಿನ(ಆಂಧ್ರ) ಎನ್ಸಿಆರ್ಟಿ ಸಂಸ್ಥೆಯ ಸಹ ಪ್ರಾಧ್ಯಾಪಕ ಪ್ರೊ. ಪ್ರಕಾಶ್.ಕೆ.ಬಡಿಗೇರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸುವರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಫೀಸ್ ಬಾನು ಅಧ್ಯಕ್ಷತೆ ವಹಿಸುವರು. ‘ಸಂಶೋಧನಾ ವಿನ್ಯಾಸ ಮತ್ತು ವಿಧಾನ’ ವಿಷಯದ ಕುರಿತು ನಡೆಯಲಿರುವ 2ನೇ ಗೋಷ್ಠಿಯಲ್ಲಿ ವಿಜಯನಗರ ಕೃಷ್ಣದೇವರಾಯ ವಿವಿ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಿಲಾನಿ ಭಾಷಾ ವಿ. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರೆ ಕಾಲೇಜಿನ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಸರ್ವಮಂಗಳಮ್ಮ.ಟಿ.ಆರ್. ಅಧ್ಯಕ್ಷತೆ ವಹಿಸುವರು. ಸಮಾರೋಪದಲ್ಲಿ ಕೊಪ್ಪಳ ವಿವಿ ಕುಲಪತಿ ಪ್ರೊ.ಎಸ್.ವಿ. ಡಾಣಿ, ಕೊಪ್ಪಳ ವಿವಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯ ಅಭಿಷೇಕ್ ಡಿ.ಎಂ. ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-35-1585769491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.