ಕನಕಗಿರಿ: ತಾವರಗೇರಾ ರಸ್ತೆಯಲ್ಲಿರುವ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ (ಪರಿಶಿಷ್ಟ ಜಾತಿ) ವಸತಿ ನಿಲಯದ ವಿದ್ಯಾರ್ಥಿಗಳು ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾನುವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಾದ ಸುರೇಶ ಚವ್ಹಾಣ, ಪ್ರಕಾಶ ಬೇರಾಗಿ, ಶಶಿಕುಮಾರ, ಕುಬೇರ್ ಸುಳೇಕಲ್, ಹೇಮರಾಜಮಾತನಾಡಿ, ‘ವಸತಿ ನಿಲಯದಲ್ಲಿ ಮೂಲಸೌಕರ್ಯ ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸಮಸ್ಯೆಗೆ ಸ್ಪಂದಿಸುವವರು ಯಾರೂ ಇಲ್ಲವಾಗಿದ್ದಾರೆ’ ಎಂದು ದೂರಿದರು.

ಶುದ್ಧ ಕುಡಿಯುವ ನೀರಿನ ಸೌಕರ್ಯವಿಲ್ಲದೆ ವಿದ್ಯಾರ್ಥಿಗಳು ಬೋರ್ವೆಲ್ ನೀರು ಕುಡಿಯುತ್ತಿದ್ದಾರೆ, ನಿಲಯದಲ್ಲಿ ವಿದ್ಯುತ್ ಸಮಸ್ಯೆಯಿದ್ದು ರಾತ್ರಿ ವೇಳೆ ಓದಲು, ಬರೆಯಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಮಲಗಲು ಸಮರ್ಪಕ ಕೊಠಡಿ, ಹಾಸಿಗೆ ವ್ಯವಸ್ಥೆ ಇಲ್ಲ, ಹೀಗಾಗಿ ಕೆಲವರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಶೌಚಾಲಯ, ಸ್ನಾನದ ಕೊಠಡಿಗಳು ದುರಸ್ತಿ ಕಾಣದೆ ಹಾಳಾಗಿವೆ. ಅನೈರ್ಮಲ್ಯ ಎದ್ದು ಕಾಣುತ್ತಿದೆ ಎಂದು ಅಳಲು ತೋಡಿಕೊಂಡರು.

ದಿನ ನಿತ್ಯದ ಮೆನು ಪ್ರಕಾರ ಉಪಹಾರ, ಊಟ ನೀಡುತ್ತಿಲ್ಲ. ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಅವರಿಗೆ ದೂರವಾಣಿ ಕರೆ ಮಾಡಿ ವಸತಿ ನಿಲಯದ ಅವ್ಯವಸ್ಥೆಯನ್ನು ಗಮನ ಸೆಳೆದರು.

ಎಸ್ಎಪ್ಐ ಜಿಲ್ಲಾಧ್ಯಕ್ಷ ಶಿವುಕುಮಾರ ಈಚನಾಳ, ತಾಲೂಕಿನ ಅಧ್ಯಕ್ಷ ಹನುಮೇಶ ಮ್ಯಾಗಡೆ ಇತರರು ಇದ್ದರು.

ವಸತಿ ನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಮಾಹಿತಿ ಇದೆ ಈ ಕುರಿತು ಪರಿಶೀಲಿಸಿ ವಾರ್ಡನ್, ಅಡುಗೆ ಸಿಬ್ಬಂದಿ ಶಿಶ್ತುಕ್ರಮ ತಗೆದುಕೊ ಳ್ಳಲಾಗುವುದು. ಶೀಘ್ರದಲ್ಲಿಯೇ ಮೂಲ ಸೌಕರ್ಯಗಳನ್ನು ವಿದ್ಯಾರ್ಥಿ ಗಳಿಗೆ ಒದಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹುಲಗಪ್ಪ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-35-159926982

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.