ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ | ಮತ ಎಣಿಕೆಗೆ ಸಕಲ ವ್ಯವಸ್ಥೆ: ಡಿ.ಸಿ

Published 13 ಮೇ 2023, 2:48 IST
Last Updated 13 ಮೇ 2023, 2:48 IST
ಅಕ್ಷರ ಗಾತ್ರ

ಕೊಪ್ಪಳ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದರು. 

‘ಮತ ಎಣಿಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಪ್ರತ್ಯೇಕ ಎರಡು ಕೊಠಡಿಗಳ ವ್ಯವಸ್ಥೆ ಮಾಡಲಾಗಿದ್ದು, ಒಂದರಲ್ಲಿ ವಿದ್ಯುನ್ಮಾನ ಮತಯಂತ್ರಗಳು ಮತ್ತು ಇನ್ನೊಂದರಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಇವಿಎಂಗಳ ಮತ ಎಣಿಕೆಗೆ 15 ಟೇಬಲ್‌ ಮತ್ತು ಅಂಚೆ ಎಣಿಕೆಗೆ 3 ಟೇಬಲ್ ಸೇರಿ 18 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.

‘ಸಿಸಿಟಿವಿ ಕ್ಯಾಮೆರಾ, ಟಿ.ವಿ.ಪರದೆ,  ಆಯಾಕ್ಷೇತ್ರದ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಮತಎಣಿಕೆ ಸಿಬ್ಬಂದಿ, ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ವ್ಯವಸ್ಥೆ, ಕುಡಿಯುವ ನೀರು, ಮಾಧ್ಯಮ ಕೇಂದ್ರ, ಚುನಾವಣಾ ವೀಕ್ಷಕರ ಆಸನಗಳು ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಂಚಿಕೆ: ಮತ ಎಣಿಕೆ ಸಿಬ್ಬಂದಿ ನಿಯೋಜನೆಯ ರ‍್ಯಾಂಡಮೈಸೇಶೆನ್ ಪ್ರಕ್ರಿಯೆ ಶುಕ್ರವಾರ ನಡೆಯಿತು.

ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ 110 ಎಣಿಕೆ ಮೇಲ್ವಿಚಾರಕರು, 125 ಎಣಿಕೆ ಸಹಾಯಕರು, 110 ಸ್ಟಾಟಿಕ್ ಅಬ್ಸರ್ಸ್‌ ಸೇರಿ ಒಟ್ಟು 345 ಜನ ಸಿಬ್ಬಂದಿಯನ್ನು ನಿಯೋಜಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT