ಕುಕನೂರು: ತಾಲ್ಲೂಕಿನ ಅಡೂರ-ರಾಜೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಯಲಬುರ್ಗಾ ತಾಲ್ಲೂಕಿನ ಬಳೂಟಿಗಿ ಗ್ರಾಮದ ಬಸವರಾಜ ಗೂಗೇರಿ (55) ಶಂಕ್ರಪ್ಪ ಸುತ್ತರೊಟ್ಟಿ (48) ಮೃತರು. ಬೃಹತ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು,ವೇಗವಾಗಿ ಯಲಬುರ್ಗಾ ಕಡೆಯಿಂದ ಬಂದ ಸಿಮೆಂಟ್ ಸಾಗಣೆ ಬೃಹತ್ ಲಾರಿಯೊಂದು ಕುಕನೂರು ಕಡೆಯಿಂದ ಯಲಬುರ್ಗಾ ಕಡೆಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸವಾರರು ಲಾರಿಯ ಚಕ್ರದಡಿಗೆ ಸಿಲುಕಿ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಪ್ರಕರಣ ಕುಕುನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-35-430727717

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.