ಕುಕನೂರು: ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಮಹನೀಯರ ಮೂರ್ತಿ ಪ್ರತಿಷ್ಠಾಪನೆ ಕಾಮಗಾರಿಗಳಿಗೆ ₹1.60 ಕೋಟಿ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದ್ದು ಮೇ 4ರಂದು ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮೂರ್ತಿ ಪ್ರತಿಷ್ಠಾಪನೆಯ ಕುರಿತು ಅಧಿಕಾರಿಗಳು ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮೂರ್ತಿಗಳ ಸ್ಥಾಪನೆಗೆ ಅಗತ್ಯವಾದ ಮೂಲಸೌಕರ್ಯ, ಸಂಚಾರ ವ್ಯವಸ್ಥೆ ಹಾಗೂ ಸಾರ್ವಜನಿಕರಿಗೆ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ಸ್ಥಳ ಆಯ್ಕೆ ಪ್ರಕ್ರಿಯೆಯನ್ನು ಅಧಿಕಾರಿಗಳು ಮಾಡಿದ್ದಾರೆ. ಕುಕನೂರು ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ಜಗಜ್ಯೋತಿ ಬಸವೇಶ್ವರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಸ್ಥಾಪನೆಗೆ ತಲಾ ₹40 ಲಕ್ಷ ಹಾಗೂ ಯಲಬುರ್ಗಾ ಪಟ್ಟಣದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿ ಸ್ಥಾಪನೆಗೆ ₹40 ಲಕ್ಷ ಮಂಜೂರಾಗಿದ್ದು, ಒಟ್ಟು ₹1.60 ಕೋಟಿ ಅನುದಾನವನ್ನು ಸರ್ಕಾರ ಒದಗಿಸಿದೆವಎಂದರು.

ಮೇ 4ರಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ, ಸಚಿವ ಶಿವಾನಂದ ಪಾಟೀಲ ಅವರೊಂದಿಗೆ ಮೂರು ಮಹನೀಯರ ಮೂರ್ತಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗುವುದು. ಪಟ್ಟಣದ ಎಪಿಎಂಸಿಯಲ್ಲಿ ನಿರ್ಮಾಣವಾಗಿರುವ ಕೋಲ್ ಸ್ಟೋರೇಜ್ ಘಟಕವನ್ನು ಲೋಕಾರ್ಪಣೆ ಮಾಡಲಾಗುವುದು ಎಂದರು.

ಸತ್ಯನಾರಾಯಣಪ್ಪ ಹರಪ್ಪನಹಳ್ಳಿ, ಹನುಮಂತಪ್ಪ ಚಂಡೂರ್, ಸಿದ್ದಯ್ಯ ಕಳ್ಳಿಮಠ, ಸಂಗಮೇಶ್ ಗುತ್ತಿ, ಗ್ರೇಡ್-2 ತಹಶೀಲ್ದಾರ್ ಮುರಳಿದ ರಾವ್ ಕುಲಕರ್ಣಿ, ಲೋಕೋಪಯೋಗಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಕೆಆರ್ಡಿಎಲ್ ಅಧಿಕಾರಿ ಅನಿಲ್ ಪಾಟೀಲ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ್ ಮಳಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-35-459317247

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.