ಕುಕನೂರು: ‘ತಾಲ್ಲೂಕಿನ ಸಿದ್ನೆಕೊಪ್ಪ ಗ್ರಾಮದಲ್ಲಿ ಮದ್ಯ ಅಕ್ರಮ ಮಾರಾಟದಿಂದ ವಿದ್ಯಾರ್ಥಿಗಳು ಸಹ ಸಾರಾಯಿ ಚಟಕ್ಕೆ ಬಲಿಯಾಗುತ್ತಿದ್ದಾರೆ. ಇದನ್ನು ತಡೆಯಬೇಕಾದ ಅಬಕಾರಿ ಇಲಾಖೆಯು ಕಣ್ಣಿದ್ದೂ ಕುರುಡನಂತೆ ವರ್ತಿಸುತ್ತಿದೆ’ ಎಂದು ಗ್ರಾಮದ ಮಹಿಳೆಯರು ಕಣ್ಣೀರು ಹಾಕಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್ -2 ತಹಶೀಲ್ದಾರ್ ಮುರಳೀಧರ್ ರಾವ್ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿ ಸಿದ್ನೆಕೊಪ್ಪ ಗ್ರಾಮದ ಮಹಿಳೆಯರಾದ ಸಿದ್ದಮ್ಮ, ವಿಶಾಲಾಕ್ಷಿ ಮಾತನಾಡಿ, ‘ನಮ್ಮ ಗ್ರಾಮದಲ್ಲಿ ಸಾರಾಯಿ ಮಾರಾಟ ಮಾಡುವುದರಿಂದ ಅನೇಕ ಕುಟುಂಬಗಳು ಬೀದಿಗೆ ಬಂದಿವೆ. ಕುಡಿದು ಬಂದು ಮನೆಯಲ್ಲಿ ಹಿಂಸೆ ನೀಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಮಕ್ಕಳು ಸಹ ಸರಾಯಿ ಚಟಕ್ಕೆ ದಾಸರಾಗುತ್ತಿರುವ ವಿದ್ಯಮಾನ ನಡೆಯುತ್ತಿರುವುದು ದುದೈರ್ವದ ಸಂಗತಿಯಾಗಿದೆ. ನಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಇಂದಿನಿಂದಲೇ ಸಾರಾಯಿ ಅಕ್ರಮ ಮಾರಾಟ ನಿಲ್ಲಬೇಕು. ಸಾರಾಯಿ ಅಕ್ರಮ ಮಾರಾಟಗಾರರನ್ನು ಗುರುತಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಬಿನ್ನಾಳ, ಯರೇಹಂಚಿನಾಳ, ಚಿಕ್ಕೇನಕೊಪ್ಪ ಗ್ರಾಮಗಳಲ್ಲಿ ಈಗಾಗಲೇ ಸ್ವಯಂ ಪ್ರೇರಿತವಾಗಿ ಮಧ್ಯ ಮಾರಾಟ ನಿಷೇಧ ಮಾಡಲಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಿದ್ನೆಕೊಪ್ಪ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು, ಕಣ್ಣೀರು ಹಾಕಿಕೊಂಡು ಸಾರಾಯಿ ಬಂದ್ ಮಾಡುವಂತೆ ಕಚೇರಿಗಳಿಗೆ ಅಲೆಯುತ್ತಿರುವುದು ನೋವಿನ ಸಂಗತಿ ಎಂದು ಗ್ರಾಮದ ಮಹಿಳೆ ಅಂದಮ್ಮ ತನ್ನ ಅಳಲು ತೋಡಿಕೊಂಡರು.

ಈ ಸಂದರ್ಭದಲ್ಲಿ ಸುವರ್ಣ, ಸಿದ್ದಮ್ಮ, ಚೆನ್ನಮ್ಮ, ಲಕ್ಷ್ಮಮ್ಮ, ದೇವಕ್ಕ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-35-286391903

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.