ಕುಕನೂರು: ‘ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್, ಜಗಜ್ಯೋತಿ ಬಸವೇಶ್ವರ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಸ್ಥಾಪನೆ ಹಾಗೂ ಅದಕ್ಕೆ ಸ್ಥಳಾವಕಾಶ ಕಲ್ಪಿಸಿಕೊಡಲು ಸಭೆಯಲ್ಲಿ ಅನುಮೋದನೆ ನೀಡಲಾಯಿತು’ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಶ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ನಡೆದ ಪಟ್ಟಣ ಪಂಚಾಯಿತಿ ತುರ್ತು ಸಭೆಯಲ್ಲಿ ಮಾತನಾಡಿ,‘ಜಗಜ್ಯೋತಿ ಬಸವೇಶ್ವರ ಅವರ ಕಂಚಿನ ಮೂರ್ತಿ ಸ್ಥಾಪನೆಗೆ ಹಳೆ ಆಸ್ಪತ್ರೆ ಜಾಗವನ್ನು ಕಲ್ಪಿಸಿಕೊಡಲು ಸದಸ್ಯರು ಒಪ್ಪಿಗೆ ಸೂಚಿಸಿದರು. ಮೇ 4ರಂದು ನಡೆಯುವ ಭೂಮಿಪೂಜೆಯ ಕಾರ್ಯವಿಧಾನಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು’ ಎಂದರು.

ಪಟ್ಟಣ ಪಂಚಾಯಿತಿ ಸದಸ್ಯ ರಾಮಣ್ಣ ಬಂಕದಮನಿ ಮಾತನಾಡಿ,‘ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಮಹನೀಯರ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿರುವುದು ಸಂತಸದ ವಿಷಯ. ಅದಕ್ಕೆ ಬೇಕಾದಂತಹ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವುದು ನಮ್ಮ ಕರ್ತವ್ಯ. ಆದ್ದರಿಂದ ಅದಕ್ಕೆ ನಮ್ಮ ಪೂರ್ವ ಸಮ್ಮತಿ ಇದೆ’ ಎಂದು ಹೇಳಿದರು.

ಸಭೆಯಲ್ಲಿ ಕುಡಿಯುವ ನೀರಿನ ಬಗ್ಗೆ ಚರ್ಚಿಸಲಾಯಿತು. ಕೆಲವು ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಅಧಿಕಾರಿಗಳು ಅದನ್ನು ಬೇಗ ಪರಿಹರಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.

ಕೆಆರ್ಡಿಎಲ್ ಅಧಿಕಾರಿ ಅನಿಲ ಪಾಟೀಲ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಮಹಾಂತೇಶ ಮುಧೋಳ, ಉಪಾಧ್ಯಕ್ಷೆ ಮಂಜುಳಾ ಕಲ್ಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ಕರಮುಡಿ, ಬಾಲರಾಜ ಗಾಳಿ, ಸಿದ್ದು ಉಳ್ಳಾಗಡ್ಡಿ, ಲಲಿತಮ್ಮ ಯಡಿಯಾಪುರ, ಶಿವನಗೌಡ ಯಲ್ಲಪ್ಪ ಗೌಡ್ರು, ಪ್ರಶಾಂತ ಆರಬೆರಳಿನ, ಮಲ್ಲು ಚೌದ್ರಿ, ಗಗನ್ ನೋಟಗಾರ, ಲಕ್ಷ್ಮಿ ಸಬರದ, ರಫಿ ಹಿರೇಹಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-35-1744525728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.