ಕುಷ್ಟಗಿ: ‘ಸಕಲ ಜೀವಿಗಳಿಗೆ ನೀರು ಅವಶ್ಯ, ನಮ್ಮ ಹಿರಿಯರು ಉಳಿಸಿರುವ ಜಲ ಮೂಲಗಳನ್ನು ಸಂರಕ್ಷಿಸಿ ಭವಿಷ್ಯದ ಪೀಳಿಗೆಗೂ ಉಳಿಸುತ್ತೇವೆ ಎಂಬ ನಿಟ್ಟಿನಲ್ಲಿ ಸಾರ್ವಜನಿಕರು ಈಗಲೇ ಸಂಕಲ್ಪ ಮಾಡಬೇಕಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ, ಸಣ್ಣ ನೀರಾವರಿ ಮತ್ತು ಪೊಲೀಸ್ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ವತಿಯಿಂದ ತಾಲ್ಲೂಕಿನ ಮದಲಗಟ್ಟಿ ಬಳಿಯ ನಿಡಶೇಸಿ ಕೆರೆ ತಟದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಜಲ ಜಾಗೃತಿ ದಿನ’ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಕೆರೆ ದಂಡೆಯಲ್ಲಿರುವ ಉದ್ಯಾನ ಆಕರ್ಷಕ ರೀತಿಯಲ್ಲಿ ಅಭಿವೃದ್ಧಿಗೊಂಡರೆ ಇಡೀ ಪ್ರದೇಶ ಸುಂದರ ಪ್ರವಾಸಿ ತಾಣವಾಗಲಿದೆ. ಹಾಗಾಗಿ ಕೆರೆ ಸುತ್ತ ಇರುವ ಗ್ರಾಮಗಳ ಜನರು ಕೆರೆ ಮತ್ತು ಉದ್ಯಾನ ರಕ್ಷಣೆಗೆ ಕಂಕಣಬದ್ಧರಾಗುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು’ ಎಂದು ಸಲಹೆ ನೀಡಿದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌವಲಗಿ, ‘ಕುಡಿಯುವ ನೀರಿನ ಸಂರಕ್ಷಣೆ ವಿಷಯದಲ್ಲಿನ ನಿರ್ಲಕ್ಷ್ಯದಿಂದ ನೀರಿಗಾಗಿ ಪರದಾಡುವಂತಾಗುತ್ತದೆ’ ಎಂದರು.

ಸರ್ಕಲ್ ಇನ್ಸ್ಪೆಕ್ಟರ್ ವಿಶ್ವನಾಥ ಹಿರೇಗೌಡ ಮಾತನಾಡಿ, ‘ಗವಿಮಠ ಹಾಗೂ ಅರಣ್ಯ ಇಲಾಖೆಗಳ ಸಹಕಾರದೊಂದಿಗೆ ನಿಡಶೇಸಿ ಕೆರೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಡಲು ಉದ್ದೇಶಿಸಲಾಗಿದೆ. ಕೆರೆ ಪ್ರದೇಶ ಮತ್ತು ಉದ್ಯಾನ ಸಂರಕ್ಷಣೆಗೆ ಪಟ್ಟಣದ ಗೆಳೆಯರ ಬಳಗದವರೂ ಸಿದ್ಧರಿದ್ದಾರೆ. ಅದಕ್ಕೆ ಜನರ ಸಹಕಾರವೂ ಅಗತ್ಯ’ ಎಂದು ಹೇಳಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ, ತಾ.ಪಂ ಇಒ ಪಂಪಾಪತಿ ಹಿರೇಮಠ, ಗ್ರೇಡ್ 2 ತಹಶೀಲ್ದಾರ್ ರಜನಿಕಾಂತ ಕೆಂಗಾರಿ, ಸಣ್ಣ ನೀರಾವರಿ ಇಲಾಖೆ ಎಇಇ ದೇವೇಂದ್ರಪ್ಪ ಇಟ್ಟಂಗಿ, ಸರ್ಕಾರಿ ವಕೀಲ ಎಲ್.ರಾಯನಗೌಡ, ವಕೀಲರ ಸಂಘದ ಅಧ್ಯಕ್ಷ ಎಚ್.ಆರ್.ನಾಯಕ್, ಪಿಎಸ್ಐ ಹನುಮಂತಪ್ಪ ತಳವಾರ ಇತರರು ಇದ್ದರು. ಕೆರೆ ಸುತ್ತಲಿನ ಗ್ರಾಮಸ್ಥರು, ಪಟ್ಟಣದ ಪರಿಸರ ಪ್ರಿಯ ಸಮಾನ ಮನಸ್ಕರ ಬಳಗದ ಎಲ್ಲ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-35-123203080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.