ಕೊಪ್ಪಳ: ತಾಲ್ಲೂಕಿನ ಹಿಟ್ನಾಳ ಹೋಬಳಿಯ ನಾರಾಯಣ ಪೇಟೆ ಹಾಗೂ ರಾಜಾರಾಮಪೇಟೆ ವ್ಯಾಪ್ತಿಯಲ್ಲಿರುವ ಮೂರು ರೆಸಾರ್ಟ್ಗಳು ಸರ್ಕಾರಿ ಜಮೀನು ಕಬಳಿಕೆ ಮಾಡಿದ ಆರೋಪವನ್ನು ಎದುರಿಸುತ್ತಿದ್ದ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಹಂಪಿ ಬೌಲ್ಡರ್ಸ್, ಹಂಪಿ ಫೆದರ್ಸ್ ಹಾಗೂ ಹಂಪಿ ವಿಸ್ಕರ್ಸ್ ರೆಸಾರ್ಟ್ಗಳ ಮೇಲೆ ಈ ಆರೋಪ ಕೇಳಿಬಂದಿದ್ದು ಸುಮಾರು 50 ಎಕರೆ ಭೂಮಿ ಒತ್ತುವರಿ ಮಾಡಿಕೊಂಡಿವೆ ಎನ್ನಲಾಗಿದೆ. ಲೋಕಾಯುಕ್ತ ಎಸ್.ಪಿ. ಸಿದ್ದರಾಜು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಲೋಕೇಶ ನೇತೃತ್ವದಲ್ಲಿ ಭೂಮಿ ಪರಿಶೀಲನೆ ನಡೆಸಲಾಯಿತು. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್, ರಾಜೇಶ್ ಮತ್ತು ಕಂದಾಯ, ಸರ್ವೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಎಫ್ಐಆರ್: ಏಪ್ರಿಲ್ 7ರಂದು ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು ಕೊಪ್ಪಳ ತಾಲ್ಲೂಕು ಭೂ ದಾಖಲೆಗಳ ಕಚೇರಿಯ ಭೂಮಿ ಸರ್ವೆಯರ್ ನಾಗರಡ್ಡಿ, ವೀರಯ್ಯ, ಕಂದಾಯ ಇನ್ಸ್ಟೆಕ್ಟರ್ ಬಸವರಾಜ ಬನ್ನಿಕೊಪ್ಪ, ಕೊಪ್ಪಳ ಕಂದಾಯ ಇಲಾಖೆಯ ವಿಎಒ ಸಾವಿತ್ರಿ ವಿರುದ್ಧವೂ ದೂರು ದಾಖಲಾಗಿದ್ದು, ಇವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-35-1036028781

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.