ಕೊಪ್ಪಳ: ‘ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಅದಾಲತ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಉಳಿದ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಸಮಾಧಾನ ಸಮಾರೋಹ ಎನ್ನುವ ವಿಶೇಷ ಲೋಕ ಅದಾಲತ್ ನಡೆಯಲಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಚಂದ್ರಶೇಖರ ಸಿ. ಅವರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಜು.11ರಂದು ರಾಷ್ಟ್ರೀಯ ಲೋಕ್ ಅದಾಲತ್ ಜರುಗಲಿದೆ. ರಾಜಿ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ-ಸ್ವಾಧೀನ, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್, ಮೋಟಾರು ಅಪಘಾತ ಪರಿಹಾರ, ವೈವಾಹಿಕ ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳನ್ನು ಪರಿಹರಿಸಿಕೊಳ್ಳಬಹುದು’ ಎಂದರು.

‘ಸುಪ್ರೀಂ ಕೋರ್ಟ್ ಆಗಸ್ಟ್ 21ರಿಂದ ಮೂರು ದಿನಗಳ ಕಾಲ ಸಮಾಧಾನ ಸಮಾರೋಹ ಎನ್ನುವ ವಿಶೇಷ ಲೋಕ ಅದಾಲತ್ ಆಯೋಜಿಸಿದ್ದು ರಾಜ್ಯಕ್ಕೆ ಸಂಬಂಧಿಸಿದ ಬಾಕಿಯಿರುವ 4,328 ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಿದೆ’ ಎಂದು ಹೇಳಿದರು.

‘ಜಿಲ್ಲೆಗೆ ಸಂಬಂಧಿಸಿದಂತೆ ಇದುವರೆಗೆ 60 ಸಿವಿಲ್ ಹಾಗೂ ಒಂದು ಕ್ರಿಮಿನಲ್ ಪ್ರಕರಣಗಳನ್ನು ಗುರುತಿಸಲಾಗಿದೆ. ಆಸಕ್ತಿಯುಳ್ಳವರು ಸುಪ್ರೀಂಕೋರ್ಟ್ನಲ್ಲಿ ರಾಜಿ ಸಂಧಾನದ ಮೂಲಕ ಪರಿಹರಿಸಿಕೊಳ್ಳಲು ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನೋಂದಣಿ ಮಾಡಿಕೊಳ್ಳಬಹುದು’ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-938418055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.