ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪಳ ಲೋಕಸಭಾ ಚುನಾವಣೆ: ಸಂಗಣ್ಣಗೆ ತಪ್ಪಿದ ಟಿಕೆಟ್‌ – ಕಾರ್ಯಕರ್ತರ ಆಕ್ರೋಶ

Published 13 ಮಾರ್ಚ್ 2024, 15:50 IST
Last Updated 13 ಮಾರ್ಚ್ 2024, 15:50 IST
ಅಕ್ಷರ ಗಾತ್ರ

ಕೊಪ್ಪಳ: ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್‌ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಂಗಣ್ಣ ಅವರ ಮುಂದೆ ಕಣ್ಣೀರಿಟ್ಟರು.

‘ಆರೆಸ್ಸೆಸ್‌ ಕುತಂತ್ರ ಮತ್ತು ಪಕ್ಷದ ಕೆಲ ನಾಯಕರ ಕುಮ್ಮಕ್ಕಿನಿಂದ ಸಂಗಣ್ಣ ಅವರಿಗೆ ಟಿಕೆಟ್ ಕೈ ತಪ್ಪಿದೆ. ಯಾರಿಗೂ ಗೊತ್ತೇ ಇಲ್ಲದ, ಪಕ್ಷಕ್ಕಾಗಿ ದುಡಿಯದ ವ್ಯಕ್ತಿಗೆ ಟಿಕೆಟ್‌ ನೀಡಿದ್ದು ಸರಿಯಲ್ಲ. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಅನುಕೂಲ ಮಾಡಿಕೊಡಲೆಂದು ನಮ್ಮವರೇ ಸಂಚು ರೂಪಿಸಿ ದುರ್ಬಲ ಅಭ್ಯರ್ಥಿಗೆ ಟಿಕೆಟ್ ಸಿಗುವಂತೆ ಮಾಡಿದ್ದಾರೆ. ಇದರಲ್ಲಿ ಆರೆಸ್ಸೆಸ್ ನಾಯಕರ ಕೈವಾಡವಿದೆ’ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಂಗಣ್ಣ, ‘ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಹೊಸಬರಿಗೆ ಅವಕಾಶ ಮಾಡಿಕೊಡುವ ಕಾರಣಕ್ಕೆ ಬಸವರಾಜಗೆ ಟಿಕೆಟ್ ಕೊಟ್ಟಿರಬಹುದು. ಪಕ್ಷದ ನಿರ್ಧಾರವನ್ನು ಗೌರವಿಸುತ್ತೇನೆ. ಕಾರ್ಯಕರ್ತರಿಗೆ ಸಾಕಷ್ಟು ನೋವಾಗಿದೆ’ ಎಂದು ಭಾವುಕರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT