ಕೊಪ್ಪಳ: ಒಳಮೀಸಲಾತಿ ಅನುಷ್ಠಾನದಲ್ಲಿ ಸಾಕಷ್ಟು ಕೆಲಸ ಮಾಡಿರುವ ಹಿರಿಯ ರಾಜಕಾರಣಿ ಕೆ.ಎಚ್. ಮುನಿಯಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಜಿಲ್ಲಾ ಮಾದಿಗ ಮಹಾಸಭಾ ಪ್ರಮುಖರು ಆಗ್ರಹಿಸಿದ್ದಾರೆ.

ಮಹಾಸಭಾದ ಮುಖಂಡ ಮಲ್ಲಿಕಾರ್ಜುನ ಪೂಜಾರ ಶನಿವಾರ ಮಾಧ್ಯಮಗೋಷ್ಢಿಯಲ್ಲಿ ಮಾತನಾಡಿ, ‘ಮುನಿಯಪ್ಪ ಅವರು ಎಂಟು ಬಾರಿ ಸಂಸದರಾಗಿ 10 ವರ್ಷ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಈಗ ರಾಜ್ಯದ ಹೊಸ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಜೊತೆಗೆ ಕ್ಯಾಬಿನೆಟ್ ದರ್ಜೆಯ ಹುದ್ದೆ ನೀಡಬೇಕು ಒತ್ತಾಯಿಸಿದರು.

ರಾಜ್ಯದಲ್ಲಿ ಮೇಲಿಂದ ಮೇಲೆ ದಲಿತ ಸಿಎಂ ಕೂಗು ಕೇಳಿ ಬರುತ್ತಿತ್ತು. ಅದೆ ರೀತಿ ಮುಖ್ಯಮಂತ್ರಿ ಹುದ್ದೆ ಕೇಳಬಹುದಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಎಡಗೈ - ಬಲಗೈ ಸ್ಪರ್ಧೆಯಲ್ಲಿ ಸಿಎಂ ಸ್ಥಾನ ದಲಿತರಿಗೆ ಗಗನ ಕುಸುಮವಾಗಗಿದೆ ಎಂದು ಪೂಜಾರ ಹೇಳಿದರು.

ಡಿಸಿಎಂ ಸ್ಥಾನ ಬಲಗೈ ಸಮುದಾಯದ ಜಿ. ಪರಮೇಶ್ವರ ಅವರಿಗೆ ನೀಡಲಾಗಿದೆ. ಈವರೆಗೆ ನಮ್ಮ ಸಮುದಾಯದವರಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಸ್ಥಾನ ದೊರಕಿಲ್ಲ. ಹಾಗಾಗಿ ಹೊಸ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ನಮ್ಮ ಸಮುದಾಯದ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮುಖಂಡರಾದ ಪ್ರಕಾಶ ಹೊಳೆಯಪ್ಪನವರ, ಡಿ.ಎಂ.ಪೂಜಾರ, ಜಯರಾಜ, ರಮೇಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-1481981106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.