ಕುಕನೂರು (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ವೀರಾಪುರ ಗ್ರಾಮದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಇತ್ತೀಚೆಗೆ ಅಂಬೇಡ್ಕರ್ ಸೇರಿದಂತೆ ವಿವಿಧ ಮಹನೀಯರ ಭಾವಚಿತ್ರಗಳಿಗೆ ಸೆಗಣಿ ಮೆತ್ತಿದ್ದ ಆರೋಪಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ವೀರಾಪುರ ಗ್ರಾಮದ ಶಿವಕುಮಾರ ಕಡೇಮನಿ ಬಂಧಿತ ಆರೋಪಿಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಬೆಳಿಗ್ಗೆ ಜಯಂತಿ ಕಾರ್ಯಕ್ರಮಕ್ಕೆ ಹಣ ಖರ್ಚು ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕಾಗಿ ಶಿವಕುಮಾರ್ ರಾತ್ರೊ ರಾತ್ರಿ ಬಿ.ಆರ್. ಅಂಬೇಡ್ಕರ್, ಬಸವೇಶ್ವರ, ಬುದ್ದ, ಪೆರಿಯಾರ್, ಬಾಬು ಜಗಜೀವನರಾಂ, ಸಾವಿತ್ರಿಬಾಯಿ ಫುಲೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಸೆಗಣಿ ಮೆತ್ತಿದ್ದ ಎಂದು ತಿಳಿದುಬಂದಿದೆ.

ಸೆಗಣಿ ಮೆತ್ತುವ ಮೂಲಕ ಅಂಬೇಡ್ಕರ್ ಜಯಂತಿ ರದ್ದು ಮಾಡುವ ಕಾರಣಕ್ಕಾಗಿ ಈ ರೀತಿಯ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪೊಲೀಸ್ ಇಲಾಖೆಯ ತಾಂತ್ರಿಕ ತಂಡದ ಸಹಾಯದಿಂದ ಅನುಮಾನದ ಮೇಲೆ ಹಲವರನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡಲಾಗಿತ್ತು. ಆಗ ಶಿವಕುಮಾರ್ ಕೃತ್ಯ ಎಸಗಿದ್ದು ಒಪ್ಪಿಕೊಂಡಿದ್ದಾನೆ ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.