ಕೊಪ್ಪಳ: ರೈತರಿಂದಲೇ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳ ಮಾರಾಟಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆ ತನ್ನ ಕಚೇರಿಯ ಆವರಣದಲ್ಲಿ ಹತ್ತು ದಿನಗಳ ಕಾಲ ಹಮ್ಮಿಕೊಂಡಿರುವ ಮಾವಿನ ಹಣ್ಣುಗಳ ಮೇಳ ಮಂಗಳವಾರ ಆರಂಭವಾಯಿತು.

ಮೇ 22ರ ತನಕ ಮೇಳ ಜರುಗಲಿದ್ದು, ಸಂಸದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇರಿ ಸೇರಿದಂತೆ ಹಲವರು ಚಾಲನೆ ನೀಡಿದರು.

2017ರಲ್ಲಿ ಮೊದಲ ಬಾರಿಗೆ ಆರಂಭವಾಗಿದ್ದ ಮೇಳಕ್ಕೆ ಈ ಬಾರಿ ದಶಕದ ಸಂಭ್ರಮ. ರೈತಸ್ನೇಹಿ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ 6500ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ಬೆಳೆಯಲಾಗುತ್ತಿದೆ. ಮೇಳದಲ್ಲಿ ದಶಹರಿ, ತೋತಾಪೂರಿ, ಮಲ್ಲಿಕಾ, ಬೆನೆಶಾನ್, ಸಿಂಧೂರಿ, ಇಮಾಮ ಪಸಂದ, ಉಪ್ಪಿನಕಾಯಿ ತಳಿಗಳನ್ನು ಮಾರಾಟಕ್ಕೆ ಇರಿಸಲಾಗಿದೆ. ಮೇಳ ಆರಂಭದ ವರ್ಷದಿಂದ ಇದುವರೆಗೆ ಬೆಳೆದು ಬಂದ ಬಗೆಯ ಛಾಯಾಚಿತ್ರಗಳ ಪ್ರದರ್ಶನ ಇರಿಸಲಾಗಿದೆ.

ಸೀಕರಣೆ: ಪ್ರತಿ ವರ್ಷದ ಮೇಳದಲ್ಲಿ ಹಣ್ಣುಗಳು ಹಾಗೂ ಅದರ ಉಪ್ಪಿನ ಕಾಯಿ ತಯಾರಿಸಲಾಗುತ್ತಿತ್ತು. ಮೊದಲ ಬಾರಿಗೆ ಸೀಕರಣೆ ವ್ಯವಸ್ಥೆ ಮಾಡ ಲಾಗಿದೆ. ಬಾಕ್ಸ್ಗಳನ್ನು ಮಾಡಲಾಗಿದ್ದು ಮನೆಗೆ ತೆಗೆದುಕೊಂಡು ಹೋಗಲು ವ್ಯವಸ್ಥೆ ಕಲ್ಪಿಸಲಾಗಿದೆ.

ಹೆಸರಘಟ್ಟದ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಹಣ್ಣು ಮಾಗಿಸುವ ಘಟಕಗಳನ್ನು ರೈತರಿಗೆ ಇಲಾಖೆಯು ಸಹಾಯಧನದ ಮೂಲಕ ಮಾವು ಬೆಳೆಯುವ ರೈತರಿಗೆ ನೀಡಲಾಗಿದೆ. ತರಹೇವಾರಿ ಮಾವಿನ ಹಣ್ಣುಗಳು ಮೇಳದಲ್ಲಿದ್ದರೂ ಕೇಸರ್ ತಳಿಗೆ ಹೆಚ್ಚಿನ ಬೇಡಿಕೆಯಿದೆ. ಗ್ರಾಹಕರನ್ನು ಆಕರ್ಷಿಸಲು ಸೆಲ್ಫಿ ಪಾಯಿಂಟ್ ಆರಂಭಿಸಲಾಗಿದೆ.

ಜಿಲ್ಲಾ ಹಾಪಕಾಮ್ಸ್ ಅಧ್ಯಕ್ಷ ಯಂಕಣ್ಣ ಯರಾಶಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡ ಬಾಳ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಯಲಬುರ್ಗಾದ ಲಿಂಗನಗೌಡ, ಗಂಗಾವತಿಯ ಯೋಗೇಶ್ವರ, ಕುಷ್ಟಗಿಯ ಶಿವಯೋಗಪ್ಪ, ಕೊಪ್ಪಳದ ರವಿಂದ್ರ ಹಂಚಿನಾಳ, ತೋಟಗಾರಿಕೆ ಇಲಾಖೆಯ ಕೇಂದ್ರ ಸ್ಥಾನಿಕ ಸಹಾಯಕರಾದ ಸಂತೋಷ ಡಿ., ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.