ಅಳವಂಡಿ: ‘ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಬಡವರಿಗೆ ಅನುಕೂಲವಾಗಲಿದೆ. ಇಂತಹ ಕಾರ್ಯ ಸಮಾಜಮುಖಿ ಕಾರ್ಯವಾಗಿವೆ. ದುಂದು ವೆಚ್ಚ, ಅಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿದೆ’ ಎಂದು ಅಳವಂಡಿ ಸಿದ್ದೇಶ್ವರ ಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೀಪದ ಮೋರನಹಳ್ಳಿ ಗ್ರಾಮದಲ್ಲಿ ಬಸವ ಜಯಂತಿ ಪ್ರಯುಕ್ತ ಗೋಣಿ ಬಸವೇಶ್ವರ ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹದಲ್ಲಿ ಅವರು ಮಾತನಾಡಿ, ‘ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರಾಣಿ, ಪಕ್ಷಿಗಳಿಗೆ ಅಲ್ಲಲ್ಲಿ ನೀರು ಇಡುವ ಕಾರ್ಯ ಪ್ರತಿಯೊಬ್ಬರಿಂದ ಆಗಬೇಕು’ ಎಂದರು.

ಗುಮ್ಮಗೋಳದ ಚನ್ನಬಸವೇಶ್ವರ ಸ್ವಾಮೀಜಿ ಮಾತನಾಡಿ, ‘ವಧು–ವರರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಬದುಕನ್ನು ಸಾಗಿಸಬೇಕು. ಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣಬೇಕು’ ಎಂದು ಹೇಳಿದರು.

ನಂದಿಪುರದ ಅಭಿನವ ಚರಂತೇಶ್ವರ ಸ್ವಾಮೀಜಿ, ಹಗರಿಬೊಮ್ಮನಹಳ್ಳಿಯ ಹಾಲಶಂಕರ ಸ್ವಾಮೀಜಿ ಮಾತನಾಡಿದರು. ಪ್ರಮುಖರಾದ ವಿರೂಪಾಕ್ಷಯ್ಯ, ಶೇಖರಯ್ಯ, ಮುತ್ತಯ್ಯ, ಅಂದಪ್ಪ, ಯಲ್ಲಪ್ಪ, ದೇವಪ್ಪ, ಹನುಮಂತ, ಫಕೀರೇಶ, ಪರಮೇಶ, ಬಸಪ್ಪ, ಬಸಪ್ಪ, ಬಿ.ಎನ್. ಹೋರಪೇಟಿ, ವಿರೂಪಾಕ್ಷಿ, ಬೇನಾಳಪ್ಪ, ಚೇತನ, ಪ್ರದೀಪ, ಮರಿಯಪ್ಪ, ನಾಗರಾಜ, ಶರಣಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-35-856291255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.