ಕೊಪ್ಪಳ: ಜಿಲ್ಲೆಯಲ್ಲಿ ಹೆರಿಗೆ ಸಂದರ್ಭದಲ್ಲಿ ಉಂಟಾಗುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ ಹೇಳಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಮಹಿಳೆ ಗರ್ಭಿಣಿ ಎಂದು ತಿಳಿದ ಕೂಡಲೇ ಆಕೆಗೆ ತಾಯಿ ಕಾರ್ಡ್ ನೀಡಲಾಗುತ್ತದೆ. ಅದರಲ್ಲಿ ಪ್ರತಿ ತಿಂಗಳು ತಪಾಸಣೆ ಹಾಗೂ ಮಹಿಳೆಯ ಆರೋಗ್ಯದ ಕುರಿತು ವಿವರ ಇರುತ್ತದೆ. ಹೆರಿಗೆ ಸಂದರ್ಭದಲ್ಲಿ ತಾಯಿ ಕಾರ್ಡ್ ಮಹತ್ವದ್ದಾಗಿದ್ದು, ಹೆರಿಗೆ ಸಮಯದ ಗಂಭೀರ ಸಮಸ್ಯೆಗಳನ್ನು ಪರಿಹರಿಸಲು ನೆರವಾಗುತ್ತದೆ. ಹೆರಿಗೆ ಸಮಯದಲ್ಲಿ ರಕ್ತದೊತ್ತಡದಲ್ಲಿನ ಏರಿಳಿತಗಳಿಂದ ಸಾವಿನಂತಹ ದುರ್ಘಟನೆ ಸಂಭವಿಸುತ್ತವೆ. ಆದ್ದರಿಂದ ಪ್ರತಿ ತಿಂಗಳೂ ಗರ್ಭಿಣಿಯ ಆರೋಗ್ಯ ತಪಾಸಣೆ ಮಾಡಬೇಕು’ ಎಂದು ಸೂಚಿಸಿದರು.

‘ಮಗು ಜನನದ ನಂತರ ಸಂಪೂರ್ಣ ಆರೋಗ್ಯವಾಗಿದ್ದಾಗಲೂ ಜನನದ ಒಂದು ಅಥವಾ ಎರಡು ದಿನಗಳ ನಂತರ ಸಾವನ್ನಪುತ್ತದೆ. ಇದಕ್ಕೆ ಕಾರಣಗಳಿರಲೇಬೇಕು. ವೈದ್ಯಕೀಯ ಕಾರಣಗಳು ಏನೇ ಇದ್ದರೂ ಅಗತ್ಯ ಸಮಯದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಮಗುವಿನ ಪ್ರಾಣ ಉಳಿಸಬಹುದು’ ಎಂದರು.

‘ಇನ್ನು ಸ್ವಲ್ಪ ದಿನಗಳಲ್ಲಿ ಮುಂಗಾರು ಆರಂಭವಾಗುತ್ತಿದ್ದು ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ನಿರ್ದೇಶನ ಕೊಟ್ಟರು.

ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ., ಜಿಲ್ಲಾ ಅನುಷ್ಠಾನಾಧಿಕಾರಿ ಡಾ. ರವೀಂದ್ರನಾಥ ಎಂ.ಎಚ್., ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಪ್ರಕಾಶ ವಿ., ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ ಎಚ್., ಜಿಲ್ಲಾ ಸರ್ವೇಕ್ಷಣಾ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನಂದಕುಮಾರ, ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ.ಗೋನಾಳ ಕುಮಾರಸ್ವಾಮಿ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ, ತಜ್ಞ ವೈದ್ಯರಾದ ಈಶ್ವರ ಸವಡಿ, ಸಂಗನಬಸಪ್ಪ, ಸೋಮಶೇಖರ ಕೆ., ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ಪಾಲ್ಗೊಂಡಿದ್ದರು.

ಜೂನ್ 28ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ

ಕೊಪ್ಪಳ: ಜಿಲ್ಲೆಯಲ್ಲಿ ಜೂನ್ 28ರಿಂದ ಜುಲೈ 1ರ ವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಮಗು ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲೆಯಲ್ಲಿ ನಡೆಯುವ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಮನೆ ಮನೆಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಬೇಕು. ಅಂಗನವಾಡಿ, ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶಗಳು, ಕೊಳೆಗೇರಿಗಳು, ವಲಸೆ ಕಾರ್ಮಿಕರ ವಸತಿ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.