ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಭೋದಕ ಆಸ್ಪತ್ರೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ವಿಶ್ವ ಋತುಚಕ್ರ ನೈರ್ಮಲ್ಯ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ ‘ಪ್ರತಿ ವರ್ಷದಂತೆ ಈ ವರ್ಷವೂ ಮೇ 28ರಂದು ವಿಶ್ವ ಋತುಚಕ್ರ ನೈರ್ಮಲ್ಯ ದಿನ ಆಚರಿಸಲಾಯಿತು. ಎಲ್ಲರೂ ಒಟ್ಟಾಗಿ, ಮುಟ್ಟಿನ ಸ್ನೇಹಿಯಾದ ಜಗತ್ತನ್ನು ನಿರ್ಮಿಸೋಣ ಎಂಬುದು ಈ ವರ್ಷದ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ವಿಜ್ಞಾನ ತಂತ್ರಜ್ಞಾನ ವಿಷಯದಲ್ಲಿ ಜಗತ್ತು ಅಭಿವೃದ್ಧಿ ಕಂಡರೂ ಮಹಿಳೆಯರ ನೈಸರ್ಗಿಕವಾದ ಋತುಚಕ್ರದ ಕಾಳಜಿ ಶುಚಿತ್ವದ ಬಗ್ಗೆ ಅರಿವಿನ ಕೊರತೆ ಹೊಂದಿದೆ’ ಎಂದರು.

‘ತಂತ್ರಜ್ಞಾನದಲ್ಲಿ ದಾಪುಗಾಲು ಇಡುತ್ತಿರುವ ನಾವು ಇಂದಿಗೂ ಮಹಿಳೆಯರ ಋತುಚಕ್ರದ ಕಟ್ಟುಪಾಡಿಗೆ ಒಳಗಾಗಿದ್ದೇವೆ. ಈ ಬಗ್ಗೆ ಇಂದಿಗೂ ಇದನ್ನು ದೇಹದ ನೈಸರ್ಗಿಕ ಚಟುವಟಿಕೆ ಎಂಬುದನ್ನು ಮರೆತು ಕಳಂಕ ಎಂಬ ರೀತಿಯಲ್ಲಿ ಕಾಣುತ್ತಿದ್ದೇವೆ. ರಾಷ್ಟ್ರಗಳು ಸಾಂಪ್ರಾದಾಯಿಕ ಮನಸ್ಥಿತಿ ಹೊಂದಿರುವ ಪುರುಷ ಮತ್ತು ಮಹಿಳೆಯರಿಗೆ ಈ ವಿಚಾರ ಕುರಿತು ಸಾರ್ವಜನಿಕವಾಗಿ ಮಾತನಾಡುವುದು ಕಷ್ಟವಾಗಿದೆ. ಜನರಿಗೆ ಈ ಋತುಚಕ್ರದ ವಿಚಾರ ಕುರಿತು ಸರಿಯಾದ ಮಾಹಿತಿ ಮತ್ತು ಅರಿವು ಮೂಡಿಸುವ ಪ್ರಯತ್ನವಾಗಬೇಕಾಗಿದೆ’ ಎಂದು ಸಲಹೆ ನೀಡಿದರು.

ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೇವಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಗಂಗಮ್ಮ, ಕಾಲೇಜಿನ ಪ್ರಾಚಾರ್ಯ ಎ.ಆರ್. ಶಿವಾನಂದ, ಆರ್.ಕೆ.ಎಸ್.ಕೆ ಜಿಲ್ಲಾ ಸಂಯೋಜಕ ಮೆಹಬೂಬಸಾಬ್ ಇಲಾಹಿ, ಜಿಲ್ಲಾ ಬೋಧಕ ಆಸ್ಪತ್ರೆಯ ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕಿ ಸ್ವರೂಪರಾಣಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-35-1432649000

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.