ಸಾಮಾಜಿಕ ತಾಣದಲ್ಲಿ ಹರಿದಾಡಿದ ಅನಾಮಧೇಯ ಪತ್ರ ಹರಿಬಿಟ್ಟವರನ್ನು ಪತ್ತೆ ಹಚ್ಚುವಂತೆ ಕೋರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ.
–ಪುಷ್ಪಲತಾ ಕವಲೂರು, ಹಿರಿಯ ಭೂ ವಿಜ್ಞಾನಿ
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕುರಿತು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಪತ್ರದ ಬಗ್ಗೆ ಯಾರೂ ದೂರು ಕೊಟ್ಟಿಲ್ಲ. ದೂರು ಕೊಟ್ಟರೆ ಕ್ರಮ ವಹಿಸುತ್ತೇವೆ.
–ಡಾ. ರಾಮ್ ಎಲ್. ಅರಸಿದ್ಧಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಕೊಪ್ಪಳದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಇರುವ ಸಿಬ್ಬಂದಿ ಹಾಗೂ ಪುಷ್ಪಲತಾ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಹೆಸರು ಬಹಿರಂಗ ಪಡಿಸಲು ಬಯಸದ ಇಲಾಖೆಯ ಹಿರಿಯ ಅಧಿಕಾರಿ
ಕೊಪ್ಪಳದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಬಹಳಷ್ಟು ವರ್ಷಗಳಿಂದ ಇರುವ ಸಿಬ್ಬಂದಿ ಹಾಗೂ ಪುಷ್ಪಲತಾ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.