ಕೊಪ್ಪಳ: ಸಚಿವ ಸ್ಥಾನ ಕೈತಪ್ಪುವ ಭೀತಿ ಎದುರಿಸುತ್ತಿರುವ ಸಚಿವ ಶಿವರಾಜ ತಂಗಡಗಿ ತಮ್ಮ ಪಕ್ಷದ ಹೈಕಮಾಂಡ್ ಮೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಆರೋಪಿಸಿದ್ದಾರೆ.

ತಂಗಡಗಿ ಇತ್ತೀಚೆಗೆ ಮಾಧ್ಯ ಮದವರ ಜೊತೆ ಮಾತನಾಡುತ್ತ ಕವನ ವಾಚಿಸುವ ಮೂಲಕ ಮೋದಿ ಅವರನ್ನು ಟೀಕಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ನವೀನ್ ‘1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಿಂದಲೂ ಬಿಜೆಪಿ ಮಹಿಳಾ ಪರವಾಗಿದೆ. ಕಾಂಗ್ರೆಸ್ ಮಹಿಳಾ ಮಸೂದೆಯನ್ನು ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ತಂಗಡಗಿ ಅವರ ಹೇಳಿಕೆ ಕೇವಲ ರಾಜಕೀಯ ಟೀಕೆಯಲ್ಲ, ಹೀನ, ಅಸಭ್ಯ ಹಾಗೂ ನಾಚಿಕೆಗೇಡಿತನದಿಂದ ಕೂಡಿದ ಹೀನ ದಾಳಿ’ ಎಂದು ಪತ್ರಿಕಾ ಹೇಳಿಕೆಯಲ್ಲಿ ನವೀನ್ ಟೀಕಿಸಿದ್ದಾರೆ.

‘ತಂಗಡಗಿ ಹೇಳಿಕೆ ಕಾಂಗ್ರೆಸ್ನ ನಿಜ ಸ್ವರೂಪವನ್ನು ಬಯಲು ಮಾಡುತ್ತದೆ. ಅಭಿವೃದ್ಧಿ, ಆಡಳಿತ, ದೇಶದ ಭವಿಷ್ಯದ ಬಗ್ಗೆ ಮಾತನಾಡಲು ಇವರ ಬಳಿ ವಿಷಯವೇ ಇಲ್ಲ, ಅದಕ್ಕಾಗಿಯೇ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ. ನರೇಂದ್ರ ಮೋದಿ ಅವರ ಜೀವನ ದೇಶದಕ್ಕಾಗಿ ಸಮರ್ಪಿತವಾಗಿದೆ’ ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-35-567003053

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.