ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ತುಮಕೂರು ಜಿಲ್ಲೆಯ ಬೀರನಕಲ್ ಗ್ರಾಮದ ರಮೇಶ ಎಂ. ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ 20 ವರ್ಷ ಜೈಲು ಹಾಗೂ ₹25 ಸಾವಿರ ದಂಡ ವಿಧಿಸಿದೆ.

ಇನ್ಸ್ಟಾಗ್ರಾಂ ಮೂಲಕ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ರಮೇಶ ಆಗಾಗ್ಗೆ ಫೋನ್ನಲ್ಲಿ ಮಾತನಾಡಿ ಸಲುಗೆ ಬೆಳೆಸಿಕೊಂಡಿದ್ದ. 2023ರ ಅಕ್ಟೋಬರ್ನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮದುವೆಯಾಗೋಣ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಹಿಳಾ ಠಾಣೆಯ ಈಗಿನ ಪೊಲೀಸ್ ಇನ್ಸ್ಪೆಕ್ಟರ್ ಆಂಜಿನೇಯ ಡಿ.ಎಸ್. ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಕುಮಾರ ಡಿ.ಕೆ. ಆದೇಶ ಪ್ರಕಟಿಸಿದರು. ಸರ್ಕಾರದ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.