ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಸ್ಪಾಂಜ್ ಮತ್ತು ಐರನ್ ಕಾರ್ಖಾನೆಗಳ ಬಗ್ಗೆ ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ ಸದನದಲ್ಲಿ ಕೊನೆಗೂ ಧ್ವನಿ ಎತ್ತಿದ್ದು ಕಾರ್ಖಾನೆಗಳನ್ನು ಸ್ಥಳಾಂತರಿಸಬೇಕು, ಇಲ್ಲವೇ ಮಾಲಿನ್ಯ ಕಡಿಮೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಅನೇಕ ಬಾರಿ ಸದನದಲ್ಲಿ ಈ ಬಗ್ಗೆ ಮಾತನಾಡಿದ್ದರೂ ಶಾಸಕ ಹಿಟ್ನಾಳ ಮಾತನಾಡಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಜಿಲ್ಲಾ ಬಚಾವೊ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾ ವೇದಿಕೆ ಪ್ರಮುಖರು ಡಿಸೆಂಬರ್ನಲ್ಲಿ ನಡೆದ ಬೆಳಗಾವಿ ಅಧಿವೇಶನದ ಸಮಯದಲ್ಲಿ ಧ್ವನಿ ಎತ್ತಲು ಜಿಲ್ಲೆಯ ಜನಪ್ರತಿನಿಧಿಗಳ ಬ್ಯಾನರ್ ಕಟ್ಟಿ ಆಗ್ರಹಿಸಿದ್ದರು. ಹೆಚ್ಚು ಮಾಲಿನ್ಯವಿರುವ ಹಿರೇಬಗನಾಳ ಗ್ರಾಮಕ್ಕೆ ತೆರಳಿದ್ದಾಗ ಅಲ್ಲಿನ ಜನ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಈ ಎಲ್ಲ ಬೆಳವಣಿಗೆಗಳ ಬಳಿಕ ಸದದಲ್ಲಿ ಮಾತನಾಡಿದ ಹಿಟ್ನಾಳ ‘ಮಾಲಿನ್ಯ ಉಂಟು ಮಾಡುತ್ತಿರುವ ಸ್ಪಾಂಜ್ ಮತ್ತು ಐರನ್ ಕಾರ್ಖಾನೆಗಳಿಂದ ಜಲ, ವಾಯುಮಾಲಿನ್ಯ ವ್ಯಾಪಕವಾಗಿದೆ. ರೈತರ ಶೇ 50ರಷ್ಟು ಫಸಲು ಹಾಳಾಗಿದೆ. ಐದು ಕಿ.ಮೀ.ಪ್ರದೇಶದಲ್ಲಿ 13 ಮಾಲಿನ್ಯಕಾರಕ ಕಾರ್ಖಾನೆಗಳಿವೆ. ಜಿಲ್ಲಾಡಳಿತ ಮಾಡಿದ ಸರ್ವೆಯಲ್ಲಿ ಹಿರೇಬಗನಾಳ ಗ್ರಾಮದ ಜನರಲ್ಲಿ ಹೆಚ್ಚು ಆರೋಗ್ಯ ಸಮಸ್ಯೆಯಿರುವುದು ಗೊತ್ತಾಗಿದೆ’ ಎಂದು ಸಭಾಧ್ಯಕ್ಷರ ಗಮನ ಸೆಳೆದೆರು.

‘ಮಾಲಿನ್ಯದಿಂದ ನೀರು ಕೂಡ ವಿಷಪೂರಿತವಾಗುತ್ತಿದೆ. ಮಕ್ಕಳಿಗೆ ಅನಾರೋಗ್ಯ ಕಾಡುತ್ತಿದೆ. ಬೃಹತ್ ಕೈಗಾರಿಕಾ ಸಚಿವರು ಕೂಡ ಇದರ ಬಗ್ಗೆ ಗಮನ ಹರಿಸಬೇಕು. ಪ್ರಸ್ತುತ ವಿಸ್ತರಣೆಗೆ ಮುಂದಾಗಿರುವ ಬಲ್ಡೊಟಾ ನಡೆಗೂ ಜನರ ವಿರೋಧವಿದೆ’ ಎಂದರು.

ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ ಕೂಡ ಈ ವಿಷಯ ಪ್ರಸ್ತಾಪಿಸಿ ‘ಹಿರೇಬಗನಾಳದ ಜನರ ಬದುಕು ನರಕವಾಗಿದೆ. ಮಕ್ಕಳು ಎದ್ದ ತಕ್ಷಣ ಕಪ್ಪುಕಣಗಳ ದೂಳು ಬಾಯಿಯಲ್ಲಿ ಇಟ್ಟುಕೊಳ್ಳಬೇಕಾಗಿದೆ’ ಎಂದರು.

ಇಬ್ಬರೂ ಶಾಸಕರ ಆಗ್ರಹಕ್ಕೆ ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಅರಣ್ಯ, ಪರಿಸರ ಸಚಿವ ಈಶ್ವರ ಖಂಡ್ರೆ ‘ಕೊಪ್ಪಳ ತಾಲ್ಲೂಕಿನಲ್ಲಿ 14 ಸ್ಪಾಂಜ್ ಐರನ್ ಕಾರ್ಖಾನೆಗಳಿದ್ದು, ಪರಿಸರ ಮತ್ತು ಜಲ ಮಾಲಿನ್ಯವಾಗುತ್ತಿರುವ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರುಗಳು ಬಂದಿವೆ. ಇತ್ತೀಚೆಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರು ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-35-1100827749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.