ಕೊಪ್ಪಳ: ನರೇಗಾ ಯೋಜನೆಯಡಿ ಎಲ್ಲ ಕೂಲಿಕಾರರು ಕೆಲಸಕ್ಕೆ ಹಾಜರಾಗಬೇಕು ಎಂದು ಪಿಡಿಒ ಬಸವರಾಜ ಬಳಿಗಾರ ಹೇಳಿದರು.

ತಾಲ್ಲೂಕಿನ ಅಗಳಕೇರಾ ಗ್ರಾ.ಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ರೋಜಗಾರ್ ದಿವಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮೇ ಮತ್ತು ಜೂನ್ವರೆಗೆ 60 ದಿನಗಳ ಕೂಲಿ ಕೆಲಸ ಪಡೆಯಬೇಕು. ಕೂಲಿ ಹಣದಿಂದ ಮಕ್ಕಳ ಶಾಲಾ, ಕಾಲೇಜು ಶುಲ್ಕ ಭರಿಸಲು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗೆ ಶುಲ್ಕ ಹಾಗೂ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ’ ಎಂದು ಹೇಳಿದರು.

ಐಇಸಿ ಸಂಯೋಜಕ ದೇವರಾಜ ಪತ್ತಾರ ಮಾತನಾಡಿ, ‘ಪ್ರತಿ ಜಾಬಕಾರ್ಡ್ಗೆ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತಿದ್ದು, ಸದುಪಯೋಗ ಪಡೆಯಬೇಕು. ಗ್ರಾಮೀಣ ಭಾಗದ ಕೂಲಿಕಾರರು ಕೂಲಿ ಅರಸಿ ಗುಳೆ ಹೋಗುವುದನ್ನು ನಿಯಂತ್ರಿಸಿ, ಸ್ಥಳೀಯವಾಗಿ ಉದ್ಯೋಗ ಒದಗಿಸಿ, ಅವರಿಗೆ ಕೂಲಿ ಹಣ ಪಾವತಿಸಿ, ಸ್ವಾವಲಂಬಿ ಜೀವನ ನಡೆಸಲು ಯೋಜನೆಯ ಸದುದ್ದೇಶವಾಗಿದೆ’ ಎಂದು ಹೇಳಿದರು.

ಗ್ರಾಸ ಪಂಚಾಯಿತಿ ಕಾರ್ಯದರ್ಶಿ ಅಕ್ಷಯಕುಮಾರ, ಡಿಇಒ ಸುಮನ್, ಮೈಲಾರಪ್ಪ, ಇಸ್ಮಾಯಿಲ್, ಮಹಾಂತೆ ಕಟ್ಟಿಮನಿ, ಲತಾ ರಾಜಶೇಖರ, ಹನಮಂತಪ್ಪ, ಗವಿಸಿದ್ದಪ್ಪ, ಬಸವರಾಜ, ಬೀರಪ್ಪ, ಮಂಜುನಾಥ ಸೇರಿ ಹಲವರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-35-548056714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.