ಕೊಪ್ಪಳ: ಇಲ್ಲಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಮುಂಗಾರು ಬೀಜ ದಿನೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಪ್ರತಿವರ್ಷ ಮೇ 25ರಂದು ಮುಂಗಾರು ಬೀಜ ದಿನೋತ್ಸವ ಆಚರಿಸಲಾಗುತ್ತಿದೆ. ಅದರಂತೆ ಇಲ್ಲಿಯೂ ಆಚರಣೆ ಮಾಡಲಾಯಿತು. ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎ.ಆರ್. ಕುರುಬರ, ವ್ಯವಸ್ಥಾಪನಾ ಮಂಡಳಿ ಸದಸ್ಯ ತಿಮ್ಮಣ್ಣ ಚವಡಿ ಹಾಗೂ ಕೊಪ್ಪಳ ಕೃಷಿವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಬದರಿ ಪ್ರಸಾದ ಪಿ.ಆರ್. ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ತಿಮ್ಮಣ್ಣ ಚವಡಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ‘ಈ ಭಾಗದ ರೈತರಿಗೆ ಉತ್ತಮ ಬೀಜಗಳನ್ನು ಒದಗಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ಬದರಿ ಪ್ರಸಾದ ಪಿ.ಆರ್. ಅವರು ಮಾತನಾಡಿ ‘ಈ ಭಾಗದ ರೈತರಿಗೆ ಉತ್ತಮ ತಳಿ ಮತ್ತು ಸಂಕರಣ ತಳಿಗಳನ್ನು ಒದಗಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಸಲಾಗಿದೆ. ವೈಜ್ಞಾನಿಕವಾಗಿ ಬಿತ್ತನೆ ಮಾಡಿ ನಿರ್ವಹಣೆ ಮಾಡಿದದಲ್ಲಿ ಉತ್ತಮ ಫಸಲು ಪಡೆಯಬಹುದು’ ಎಂದು ತಿಳಿಸಿದರು.

ಗುಳದಳ್ಳಿ ಕೃಷಿ ಸಂಶೋಧನಾ ಕೇಂದ್ರದ ಕ್ಷೇತ್ರ ಅಧೀಕ್ಷಕ ಹನುಮಂತಪ್ಪ ದಾಸರಹಳ್ಳಿ, ಕುಕನೂರು ತಾಲ್ಲೂಕಿನ ಕೃಷಿಕ ಸಮಾಜದ ನಿರ್ದೇಶಕ ಪ್ರಕಾಶ್ ಮೇಟಿ, ಪ್ರಗತಿಪರ ರೈತರಾದ ಮುದುಕಪ್ಪ ದೇವರ, ಜೀವಂತ ಗೌಡ, ಗವಿಸಿದ್ದಪ್ಪ, ಶರಣೆಗೌಡ ಹಾಗೂ ಹನುಮಂತಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-35-266184580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.