ಕೊಪ್ಪಳ: ತಾಲ್ಲೂಕಿನ ಇರಕಲ್ಲಗಡ ಗ್ರಾಮ ಪಂಚಾಯಿತಿ ವತಿಯಿಂದ ಕೊಡದಾಳ ಗ್ರಾಮದ ವಿಜಯ ಮಹಾಂತಶ್ರೀ ವೇದಿಕೆಯಲ್ಲಿ ಗುರುವಾರ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಐಇಸಿ ಕಾರ್ಯಕ್ರಮದಡಿ ರೋಜಗಾರ್ ದಿವಸ್ ಆಚರಣೆ ಮಾಡಲಾಯಿತು.

ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಐಇಸಿ ಸಂಯೋಜಕ ಶ್ರೀನಿವಾಸ ಚಿತ್ರಗಾರ ‘ನರೇಗಾ ಯೋಜನೆಯಡಿ ಎಲ್ಲಾ ಕೂಲಿಕಾರರು ಫಾರಂ ನಂ.6 ಸಲ್ಲಿಸುವ ಮೂಲಕ ಕೂಲಿ ಕೆಲಸಕ್ಕೆ ಹಾಜರಾಗಬೇಕು. ಪ್ರತಿ ಮಾನವ ದಿನಕ್ಕೆ ₹370 ಕೂಲಿ ನಿಗದಿಪಡಿಸಿದ್ದು ಸಂಪೂರ್ಣವಾಗಿ ಕೂಲಿ ಕೆಲಸ ನಿರ್ವಹಿಸಿ ಪೂರ್ತಿ ಹಣ ಪಡೆಯಬೇಕು’ ಎಂದರು.

‘ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕೆಲಸದ ಜೊತೆಗೆ ಆರೋಗ್ಯ ಬಗ್ಗೆಯೂ ಕಡೆ ಕಾಳಜಿವಹಿಸಬೇಕು. 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಜಾಬ್ಕಾರ್ಡ್ ಬಳಕೆ ಮಾಡಿಕೊಂಡು ಕೂಲಿ ಕೆಲಸ ಪಡೆಯಲು ಕಡ್ಡಾಯವಾಗಿ ನಮೂನೆ-6 ಸಲ್ಲಿಸಬೇಕು’ ಎಂದು ತಿಳಿಸಿದರು.

ತಾಲ್ಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ, ಗ್ರಾಮ ಪಂಚಾಯಿತಿ ಡಿಇಒ ಶರಣಪ್ಪ, ಸಿಬ್ಬಂದಿ ಸಿದ್ರಾಮಯ್ಯಸ್ವಾಮಿ, ಗ್ರಾಮ ಕಾಯಕ ಮಿತ್ರ ಶ್ರೀದೇವಿ, ಕಾಯಕ ಬಂಧುಗಳಾದ ಹನಮಂತಪ್ಪ, ಮರಿಯಪ್ಪ, ಕಿರಣ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-35-738890494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.