ಕೊಪ್ಪಳ: ತಾಲ್ಲೂಕಿನ ಅಳವಂಡಿ ಹೋಬಳಿಯ ಗ್ರಾಮವೊಂದರ ಮುಸ್ತಫಾಖಾದ್ರಿ ಎಕ್ಸಾಪುರ ಎನ್ನುವ ಯುವಕನ ಎರಡ್ಮೂರು ಮೊಬೈಲ್ಗಳಲ್ಲಿ ಆತ ಯುವತಿಯರೊಂದಿಗೆ ಅಶ್ಲೀಲವಾಗಿ ತೆಗೆಸಿಕೊಂಡಿದ್ದಾನೆ ಎನ್ನಲಾದ ಫೋಟೊ ಹಾಗೂ ವಿಡಿಯೊಗಳು ಪತ್ತೆಯಾಗಿದ್ದು, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

ವಿವಿಧ ಧರ್ಮಗಳ ಮಧ್ಯಮವರ್ಗದ ಯುವತಿಯರನ್ನು ಗುರಿಯಾಗಿಟ್ಟುಕೊಂಡು ಯುವಕ ಫೋಟೊ ಹಾಗೂ ವಿಡಿಯೊ ತೆಗೆಸಿಕೊಂಡಿದ್ದಾನೆ, ಕುಷ್ಟಗಿ ತಾಲ್ಲೂಕಿನ ಗ್ರಾಮವೊಂದರ ಯುವತಿ ಜೊತೆ ಓಡಾಡುವಾಗ ಕಾರ್ಯಕರ್ತರು ಇಬ್ಬರನ್ನೂ ಜಿಲ್ಲಾಸ್ಪತ್ರೆ ಬಳಿ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಮುಸ್ತಫಾನ ಮೊಬೈಲ್ ಪರಿಶೀಲಿಸಿದಾಗ ಹತ್ತಾರು ಯುವತಿಯರ ಜತೆ ಇರುವ ಅಪಾರ ವಿಡಿಯೊಗಳು ಪತ್ತೆಯಾಗಿವೆ. ಇವುಗಳಲ್ಲಿ ಮುಸ್ತಫಾ ಹಿಂದೂ ಯುವತಿಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿರುವ ದೃಶ್ಯಗಳು ಇವೆ ಎಂದು ವಿಎಚ್ಪಿ ಆರೋಪಿಸಿದೆ. ಈ ಕುರಿತು ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಎಚ್ಪಿಯ ಕೊಪ್ಪಳ ಅಧ್ಯಕ್ಷ ಸಂಗಮೇಶ ಹಿರೇಮಠ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ’ಆ ಯುವಕನನ್ನೇ ಮದುವೆಯಾಗುವುದಾಗಿ ಯುವತಿ ಹೇಳಿಕೆ ನೀಡಿದ್ದಾಳೆ. ಮೊಬೈಲ್ನಲ್ಲಿವೆ ಎನ್ನಲಾದ ಅಶ್ಲೀಲ ವಿಡಿಯೊಗಳ ಬಗ್ಗೆ ಪರಿಶೀಲನೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-35-325435474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.