ಸೋಮವಾರ, ಜುಲೈ 13, 2020
29 °C
ರಾಯಚೂರು ಜಿಲ್ಲೆಯ ಮಸ್ಕಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಸೋಂಕಿತ ವ್ಯಕ್ತಿ

ಕೊಪ್ಪಳ | ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ರಾಯಚೂರು ಜಿಲ್ಲೆಯ ಮಸ್ಕಿಯ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಮತ್ತೊಬ್ಬ ವ್ಯಕ್ತಿಗೆ ಕೋವಿಡ್‌-19 ತಗುಲಿರುವುದು ಧೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ ಹೇಳಿದರು. 

ಈ ಕುರಿತು ಮಂಗಳವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

27 ವರ್ಷದ ಈ ವ್ಯಕ್ತಿ (ಪಿ–2254) ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಕೇಸೂರು ಗ್ರಾಮದ ನಿವಾಸಿ. ಅವರು ಮೇ 17 ಮತ್ತು 18 ರಂದು ಮಸ್ಕಿಯಲ್ಲಿಯೇ ಇದ್ದು, ಮೇ 20 ರಂದು ಕೇಸೂರಿಗೆ ಬಂದಿದ್ದಾರೆ.

ತೀವ್ರ ಶೀತ ಜ್ವರದಿಂದ ಬಳಲುತ್ತಿದ್ದುದರಿಂದ ಸಮೀಪದ ದೊಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಅವರ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಅವರಿಗೆ  ಕೋವಿಡ್–19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ವ್ಯಕ್ತಿಯೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಮಾಹಿತಿಯನ್ನು 24 ಗಂಟೆಗಳ ಒಳಗಡೆ ಪಡೆದು, ಅವರನ್ನೂ ಸಹ ಕ್ವಾರಂಟೈನ್ ಮಾಡಲಾಗುತ್ತದೆ. ಸೋಂಕಿತ ವ್ಯಕ್ತಿಯಿಂದ ನೋಡಲ್ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಕೇಸೂರು ಮತ್ತು ದೊಟಿಹಾಳ ಈ ಎರಡೂ ಗ್ರಾಮಗಳು ಅಕ್ಕ-ಪಕ್ಕದಲ್ಲಿರುವುದರಿಂದ ಸೋಂಕಿತ ವ್ಯಕ್ತಿಯ ಮನೆಯ ಅಕ್ಕ-ಪಕ್ಕ ಮತ್ತು ಅವರು ಭೇಟಿ ನೀಡಿದ ಪ್ರದೇಶವನ್ನು ಕೋವಿಡ್-19ರ ಹೊಸ ನಿಯಮಗಳನ್ವಯ ಬಫರ್ ಜೋನ್ ಮಾಡಲಾಗುವುದು ಎಂದು ಅವರು ಹೇಳಿದರು.

ಸೋಂಕಿತ ವ್ಯಕ್ತಿಯ ಜತೆಗೆ ಅವರ ಸಹೋದರ ಪ್ರಾಥಮಿಕ ಸಂಪರ್ಕ ಹೊಂದಿರುವ ಹಿನ್ನೆಯಲ್ಲಿ ಇವರು ತೆರಳಿದ ಸ್ಥಳಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಆಶಾ ಕಾರ್ಯಕರ್ತೆಯರು ಹಾಗೂ ಬಿಎಲ್ಒ ಗಳು ಜಿಲ್ಲೆಯಲ್ಲಿ ಈಗಾಗಲೇ ಎರಡು ಸಲ ಸರ್ವೆ ಕಾರ್ಯ ಮಾಡಿದ್ದು, ಕೊರೊನಾ ಸೋಂಕಿನ ಲಕ್ಷಣಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೋಗ್ಯ ತಪಾಸಣೆ ತಕ್ಷಣ ಮಾಡಿಸಲಾಗುತ್ತಿದೆ ಎಂದು ಹೇಳಿದರು.

ಜನರು ಕೆಲವು ಕಡೆ ಅಂತರ ಕಾಪಾಡಿಕೊಳ್ಳದಿರುವುದು, ಮಾಸ್ಕ್ ಧರಿಸದೆ ಬೇಜವಾಬ್ದಾರಿಯಿಂದ ತಿರುಗಾಡುತ್ತಿರುವುದು ಕಂಡು ಬರುತ್ತಿದೆ. ಆರೋಗ್ಯ ರಕ್ಷಣೆಗೆ ನಿಯಮಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲೆಯ ಸಾರ್ವಜನಿಕರಿಗೆ ಮನವಿ
ಮಾಡಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು