ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಶನಿವಾರ ನಡೆದ ಪುರುಷರ 100 ಮೀಟರ್ ಸ್ಪರ್ಧೆಯ ನೋಟ
ಇತ್ತೀಚಿನ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಅಚ್ಚುಕಟ್ಟಾಗಿ ನಿಭಾಯಿಸಿದೆ. ಕಾರ್ಯಕ್ರಮ ಆಯೋಜನೆ ಮಾಡಿದ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಡಾ. ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆಗಳು ಪೂರಕವಾಗಿದ್ದು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರತಿವರ್ಷ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಪೊಲೀಸರಿಗೆ ಉತ್ತಮ ಅವಕಾಶ.