ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳು ಮತ್ತು ವಿಸ್ತರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಹೋರಾಟ ಮಂಗಳವಾರ 152 ದಿನಗಳನ್ನು ಪೂರ್ಣಗೊಳಿಸಿತು.

ಕೊಪ್ಪಳ ನಗರಸಭೆ ಮಾಜಿ ಅಧ್ಯಕ್ಷ ಅಕ್ಬರಪಾಷಾ ಪಲ್ಟನ್ ಮಾತನಾಡಿ,‘ಬಲ್ಡೋಟ ಬೃಹತ್ ಬಂಡವಾಳದಲ್ಲಿ ವಿಸ್ತರಣೆಯಾದರೆ ಕೊಪ್ಪಳ ಹಾಗೂ ಭಾಗ್ಯನಗರ ಸಂಪೂರ್ಣವಾಗಿ ಮಾಲಿನ್ಯಗೊಂಡು ಇಲ್ಲಿನ ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತದೆ’ ಎಂದರು. ಜಂಟಿ ಕ್ರಿಯಾ ವೇದಿಕೆಯ ತಂಡದವರು ಗವಿಶ್ರೀನಗರ, ಸದಾಶಿವನಗರ, ಕಿನ್ನಾಳ ರಸ್ತೆಯ ಅಗಡಿ ಲೇಔಟ್ ಬಡಾವಣೆಗೆ ತೆರಳಿ ಕರಿಬೂದಿಯ ದರ್ಶನ ಮಾಡಿದರು. ಅಲ್ಲಿನ ಗೃಹಿಣಿಯರಿಂದ ನೆಲಹಾಸು ತೊಳೆದು, ತಿಳಿನೀರು ಕರಿನೀರಿಗೆ ಬದಲಾಗುವ ದೃಶ್ಯ ನೋಡಿದರು.

ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ,‘ಮಹಿಳೆಯರು ಜಾಗೃ ತರಾಗಿ ಹೋರಾಟ ಮಾಡಲು ಮುಂದೆ ಬರಬೇಕು. ಪರಿಸ್ಥಿತಿ ಕಳೆದುಕೊಂಡು ಮರುಗುವುದಕ್ಕಿಂತ ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದು ಕರೆ ನೀಡಿದರು.

ಸಂಚಾಲಕರಾದ ಮಲ್ಲಿಕಾರ್ಜುನ ಬಿ.ಗೋನಾಳ, ಮಂಜುನಾಥ ಜಿ.ಗೊಂಡಬಾಳ, ಪ್ರಕಾಶಕ ಡಿ.ಎಂ.ಬಡಿಗೇರ, ಜ್ಯೋತಿ ಎಂ. ಗೊಂಡಬಾಳ, ಕಾವ್ಯಾ ಗಡಾದ, ಸರೋಜಾ ಬಾಕಳೆ, ವಿದ್ಯಾ ಶರಣಪ್ಪ ಸಜ್ಜನ್, ಗ್ಯಾನೇಶ ಹ್ಯಾಟಿ ಭಾಗ್ಯನಗರ, ನಿವೃತ್ತ ಪ್ರಾಚಾರ್ಯ ಎಸ್.ಬಿ.ರಾಜೂರು, ಮಹಾದೇವಪ್ಪ ಮಾವಿನಮಡು, ಶಿವಪ್ಪ ಜಲ್ಲಿ, ರತ್ನಮ್ಮ ದೊಡ್ಡಮನಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-35-46554684

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.