ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೇದಾರನಾಥ ದರ್ಶನಕ್ಕೆ ತೆರಳಿದ್ದ ಕೊಪ್ಪಳದ ಅರ್ಚಕ ಸಾವು

Published 20 ಜೂನ್ 2024, 15:57 IST
Last Updated 20 ಜೂನ್ 2024, 15:57 IST
ಅಕ್ಷರ ಗಾತ್ರ

ಕೊಪ್ಪಳ: ಕೇದಾರನಾಥ ದರ್ಶನಕ್ಕೆ ತೆರಳಿದ್ದ ನಗರದ ಅರ್ಚಕ ಸಿದ್ದಯ್ಯ ಶಾಸ್ತ್ರಿ (33) ಋಷಿಕೇಶದಲ್ಲಿ ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ‌.

ಸಿದ್ದಯ್ಯ ಇಲ್ಲಿನ ಶಿವರಾತ್ರೇಶ್ವರ ದೇವಾಲಯದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅದಕ್ಕೂ ಮೊದಲು ಗವಿಮಠದಲ್ಲಿ ಅರ್ಚಕರಾಗಿದ್ದರು. ಕಳೆದ 10 ದಿನಗಳಿಂದ ಧಾರ್ಮಿಕ ಕ್ಷೇತ್ರಗಳ ಯಾತ್ರೆ ಕೈಗೊಂಡಿದ್ದರು. ಕೇದಾರನಾಥ ದರ್ಶನ ಮುಗಿಸಿಕೊಂಡು ವಾಪಸ್ ಬರುವಾಗ ಋಷಿಕೇಶದಲ್ಲಿ ಕೊನೆಯುಸಿರೆಳೆದಿದ್ದಾರೆ.

ಎದೆ ನೋವು ಕಾಣಿಸಿಕೊಂಡಾಗ ಅಲ್ಲಿನ ಜನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಒಂದೆರೆಡು ದಿನಗಳಲ್ಲಿ ಮೃತದೇಹ ಕೊಪ್ಪಳಕ್ಕೆ ತರಲು ವ್ಯವಸ್ಥೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT