ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಇಲ್ಲಿನ ನಗರಸಭೆ ಸಮೀಪದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಗುರುವಾರ 196 ದಿನಗಳನ್ನು ಪೂರ್ಣಗೊಳಿಸಿತು.

ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಕೊಪ್ಪಳ ಪರಿಸರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಮಾಲಿನ್ಯ ತಡೆಯಬೇಕು, ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡಬಾರದು ಎಂದು ಧರಣಿ ನಿರತರು ಆಗ್ರಹಿಸಿದರು. ಮೇ 18ರಂದು ಹೋರಾಟಕ್ಕೆ 200 ದಿನಗಳಾಗಲಿದ್ದು ಅಂದು ಬಹಿರಂಗ ಸಭೆ ನಡೆಯುತ್ತದೆ. ಸಭೆಯಲ್ಲಿ ಆರ್ಥಿಕ ತಜ್ಞ ಹಂಪಿ ವಿ.ವಿ. ನಿವೃತ್ತ ಪ್ರಾಧ್ಯಾಪಕ ಟಿ.ಆರ್.ಚಂದ್ರಶೇಖರ, ನಿರ್ಮಲ ತುಂಗಭದ್ರಾ ಆಂದೋಲನ ಹೋರಾಟಗಾರ ಡಾ. ಶಿವಕುಮಾರ ಮಾಲಿಪಾಟೀಲ್ ಸೇರಿದಂತೆ ಹಲವರು ಪಾಲ್ಗೊಳ್ಳುವರು ಎಂದು ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ತಿಳಿಸಿದ್ದಾರೆ. ಸಂಚಾಲಕ ಮಲ್ಲಿಕಾರ್ಜುನ ಬಿ. ಗೋನಾಳ, ಪ್ರಕಾಶಕ ಡಿ ಎಂ. ಬಡಿಗೇರ, ಗವಿಸಿದ್ದಪ್ಪ ವದ್ನಾಳ ಬಗನಾಳ, ರಾಜಶೇಖರ ಏಳುಬಾವಿ, ನಿವೃತ್ತ ಪ್ರಾಚಾರ್ಯ ಬಿ.ಜಿ. ಕರಿಗಾರ, ಮಹಾದೇವಪ್ಪ ಮಾವಿನಮಡು, ನಾಗರಾಜ ಕುಷ್ಟಗಿ ಲಾಚನಕೇರಿ, ಬಸವರಾಜಪ್ಪ ಶೆಟ್ಟರ್ ಸೇರಿ ಹಲವರು ಇದ್ದರು.

ಹೋರಾಟ: ಜಿಲ್ಲಾಕೇಂದ್ರದ ಹೊರವಲಯದಲ್ಲಿರುವ ಬಲ್ಡೋಟ ಕಂಪನಿಯ ಅಧೀನದಲ್ಲಿರುವ ಬಸಾಪುರ ಕೆರೆಯನ್ನು ಜಾನುವಾರುಗಳಿಗೆ ಮುಕ್ತ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ನಡೆಸುತ್ತಿರುವ ಧರಣಿ ಮುಂದುವರಿದಿದೆ. ಸಂಘದ ಜಿಲ್ಲಾಧ್ಯಕ್ಷ ಭೀಮಸೇನ ಕಲಕೇರಿ, ಮೂಕಪ್ಪ ಮೇಸ್ತ್ರಿ ಬಸಾಪುರ, ಕನಕಪ್ಪ ಪೂಜಾರ ಇಂದರಗಿ ಸೇರಿ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-35-2145017985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.