ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ ಧರಣಿ ಮಂಗಳವಾರ 215 ದಿನಗಳನ್ನು ಪೂರ್ಣಗೊಳಿಸಿತು.

ಧರಣಿಗೆ ಕರ್ನಾಟಕ ರೈತ ಸಂಘ (ಎಐಯುಕೆಎಸ್) ಬೆಂಬಲಿಸಿತು. ಎಐಯುಕೆಎಸ್ ರಾಷ್ಟ್ರ ಸಮಿತಿ ಮುಖಂಡ ಡಿ.ಎಚ್.ಪೂಜಾರ ಮಾತನಾಡಿ ‘ಕಂಪನಿ ಕಾರ್ಪೋರೇಟರ್ಗಳ ಅತಿಯಾದ ಭೂದಾಹಕ್ಕೆ ಬೆಂಗಳೂರು ಸುತ್ತಲಿನ ಬಿಡದಿ, ಆನೇಕಲ್, ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ ಗ್ರಾಮಗಳು ಬಲಿಯಾಗುತ್ತಿವೆ. ಅಲ್ಲಿನ ಜನ ಪ್ರಾಣ ಕೊಟ್ಟೇವು ಭೂಮಿ ಬಿಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ’ ಎಂದರು.

ವೇದಿಕೆ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ನಿವೃತ್ತ ಪ್ರಾಚಾರ್ಯ ಎಲ್.ಎಫ್. ಪಾಟೀಲ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಗೌಡ ಕನ್ನೇರುಮಡು, ಜಿಲ್ಲಾ ಕಾರ್ಯದರ್ಶಿ ಬಸವರಾಜ ನರೇಗಲ್, ರವಿ ಕಾಂತನವರ, ರಾಜಶೇಖರ ಏಳುಬಾವಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-32-1493458613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.