ಕೊಪ್ಪಳ: ತಾಲೂಕಿನ ಹ್ಯಾಟಿ, ಮೆಳ್ಳಿಕೇರಿ, ಮುದ್ದಾಬಳ್ಳಿ ಭಾಗಗಳ ಹೊಲಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾದ ಹಾನಿಯನ್ನು ಜೆಡಿಎಸ್ ಮುಖಂಡರ ನಿಯೋಗದೊಂದಿಗೆ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

‘ಇತ್ತೀಚಿಗೆ ಸಂಭವಿಸಿದ ಭಾರಿ ಗಾಳಿ ಮತ್ತು ಮಳೆಯಿಂದ ಹಾನಿಗೊಳಗಾದ ರೈತರ ಪ್ರತಿ ಎಕರೆಗೆ ₹5 ಲಕ್ಷ ಪರಿಹಾರ ನೀಡಬೇಕು’ ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

‘ಸುಮಾರು 150 ಎಕರೆ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದ ಬಾಳೆ, ಕಬ್ಬು, ಎಲೆಬಳ್ಳಿ ಹಾಗೂ ಇತರೆ ಬೆಳೆಗಳು ಸಂಪೂರ್ಣವಾಗಿ ನೆಲ ಕಚ್ಚಿವೆ. ಕೃಷಿ ಚಟುವಟಿಕೆಗಳಿಗಾಗಿ ರೈತರು ಇಡೀ ವರ್ಷ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿದ್ದಾರೆ. ಕಟಾವಿಗೆ ಬಂದಿದ್ದ ಬೆಳೆಗಳು ಹಾಳಾಗಿ ದ್ದರಿಂದ ರೈತರು ಭಾರಿ ಪ್ರಮಾಣದ ನಷ್ಟ ಅನುಭವಿಸಿದ್ದಾರೆ’ ಎಂದು ಹೇಳಿದರು.

‘ಕನಿಷ್ಠ ಪಕ್ಷ ಪ್ರತಿ ಎಕರೆಗೆ ₹5 ಲಕ್ಷ ಪರಿಹಾರ ಘೋಷಣೆ ಆಗಬೇಕು. ನಿಯಮಾವಳಿಗಳ ನೆಪದಲ್ಲಿ ಹಣ ಬಿಡುಗಡೆಗೆ ವಿಳಂಬ ಮಾಡಬಾರದು. ಶಾಸಕರು ಹಾಗೂ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ಸಿದ್ಧಪಡಿಸಿದ್ದಾರೆ. ಆದಷ್ಟು ಶೀಘ್ರದಲ್ಲಿ ಪರಿಹಾರ ನಿಧಿ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ತಲುಪಬೇಕು. ಅತಿರೇಕದ ಘಟನೆಗಳು ಸಂಭವಿಸುವ ಮೊದಲೇ ಜಿಲ್ಲಾಡಳಿತ ಎಚ್ಚೆತ್ತುಕೊಳ್ಳಬೇಕು’ ಎಂದು ಮುಖಂಡರು ಒತ್ತಾಯಿಸಿದರು.

ತಾಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ, ತಾಲೂಕು ಜೆಡಿಎಸ್ ಎಸ್ಸಿ ಘಟಕದ ತಾಲ್ಲೂಕು ಅಧ್ಯಕ್ಷ ಸುರೇಶ ಪುಜಾರಿ, ಕೊಪ್ಪಳ ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ, ನಗರ ಘಟಕ ಅಧ್ಯಕ್ಷ ಸೋಮುನಗೌಡ ಹೊಗಾರನಾಳ, ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ರವಿ ಮೇದಾರ, ಜಿಲ್ಲಾ ಮುಖಂಡರಾದ ಪ್ರಕಾಶರೆಡ್ಡಿ ಬಸರಗಿಡದ, ಮಂಜುನಾಥ ರೋಡ್ಡರ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-35-1356182399

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.