ಕೊಪ್ಪಳ: ನಗರದ ರಾಜಕಾಲುವೆ ಒತ್ತುವರಿ ತೆರವು ಹಾಗೂ ಗಿಡಗಂಟಿಗಳನ್ನು ಪ್ಲಾಸ್ಟಿಕ್ ತ್ಯಾಜ್ಯ ಸ್ವಚ್ಛಗೊಳಿಸಿ, ಮುಂಗಾರು ಮಳೆಯಿಂದಾಗಬಹುದಾದ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರಸಭೆ ಮುಂದೆ ಸೋಮವಾರ ಸಾಂಕೇತಿಕ ಪ್ರತಿಭಟನಾ ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಅವರಿಗೆ ಪ್ರಭಾರ ಪೌರಾಯುಕ್ತ ಮಂಜುನಾಥ ಗುಂಡೂರ ಅವರ ಮೂಲಕ ಮನವಿ ಸಲ್ಲಿಸಿದರು.

ಸಾಂಕೇತಿಕ ಪ್ರತಿಭಟನಾ ಧರಣಿ ಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಗೊಳಿಸದೆ ನಿರ್ಲಕ್ಷ್ಯ ಮಾಡಿರುವ ಮತ್ತು ನಗರದ ಎಲ್ಲಾ ಬಡಾವಣೆಗಳ ವಾರ್ಡು ಗಳ ಚರಂಡಿಗಳನ್ನು ಸ್ವಚ್ಛಗೊಳಿಸಲು ನಿರಾಸಕ್ತಿ ತೋರಿರುವ ನಗರ ಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು.

ನಗರಸಭೆ ಸಕಾಲಕ್ಕೆ ಕ್ರಿಯಾಶೀಲಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಸಾರ್ವಜನಿಕರನ್ನು ಒಟ್ಟುಗೂಡಿಸಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಒಕ್ಕೂಟ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಜನಪರ ಸಂಘಟನೆ ಒಕ್ಕೂಟದ ಅಧ್ಯಕ್ಷ ಎಸ್.ಎ. ಗಫಾರ್, ಪ್ರಗತಿಪರ ಸಂಘಟನೆ ಒಕ್ಕೂಟದ ಸಂಚಾಲಕ ಬಸವರಾಜ ಶೀಲವಂತರ, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ, ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ತುಕಾರಾಮ ಪಾತ್ರೋಟಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮುದುಕಪ್ಪ ಹೊಸಮನಿ, ದಲಿತ ಸಂಘರ್ಷ ಸಮಿತಿ ರಾಜ್ಯ ಕಾರ್ಯದರ್ಶಿ ರಾಮಣ್ಣ ಕಂದಾರಿ, ಜ್ಞಾನ ಸುಂದರ, ಕೊಳಚೆ ನಿರ್ಮೂಲನಾ ವೇದಿಕೆಯ ಸಂಚಾಲಕ ಮೊಹಮ್ಮದ್ ಗೌಸ್, ಕರ್ನಾಟಕ ಪ್ರಜಾ ಶಕ್ತಿ ಸಮಿತಿಯ ಜಿಲ್ಲಾ ಖಜಾಂಚಿ ಮುದ್ದುರಾಜ್ ಚನ್ನದಾಸರ, ಗಾಳೆಪ್ಪ ಮುಂಗೋಲಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಆದಿಲ್ ಪಟೇಲ್, ಶ್ರೀಕಾಂತ್ ಎಚ್. ಹೊಸಮನಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-35-1564514306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.