ಕೊಪ್ಪಳ: ವರನಟ ರಾಜಕುಮಾರ ಜನ್ಮದಿನದ ನಿಮಿತ್ತ ನಗರದ ಸಾಹಿತ್ಯ ಭವನದಲ್ಲಿ ಏ. 24ರಂದು ಸಂಜೆ 5.30ಕ್ಕೆ ರಾಜ್ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ಅವರ ಚಲನಚಿತ್ರ ಗೀತೆಗಳನ್ನು ಹಾಡಲು ಸಿನಿಮಾದ ಸಂಭಾಷಣೆ (ಮಿಮಿಕ್ರಿ) ಹೇಳಲು ಆಸಕ್ತ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ. ಹೆಸರು ನೋಂದಣಿಗೆ ಏ. 22ರ ತನಕ ಅವಕಾಶ ಕಲ್ಪಿಸಲಾಗಿದೆ.

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರೋಕೆ ಹಾಡುಗಾರರಿಗೆ ಆದ್ಯತೆ ಸಿಗಲಿದೆ.

ವಯಸ್ಸಿನ ಮಿತಿ ಇರುವುದಿಲ್ಲ. ಒಬ್ಬರಿಗೆ ಒಂದು ಹಾಡಿಗೆ ಮಾತ್ರ ಅವಕಾಶವಿದ್ದು, ತಮ್ಮ ಹೆಸರು ಮತ್ತು ಪೂರ್ಣವಿಳಾಸ ನೋಂದಾಯಿಸಲು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ (9916111356), ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜಮದಾರ (9886922815) ಅವರನ್ನು ಸಂಪರ್ಕಿಸಿ ಎಂದು ಗವಿಸಿದ್ದಪ್ಪ ಹೊಸಮನಿ ಅವರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-35-1578678619

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.