ಕೊಪ್ಪಳ: ಅನ್ನಭಾಗ್ಯ ಯೋಜನೆ ಪಡಿತರ ಅಕ್ಕಿಯನ್ನು ಕಳ್ಳಸಾಗಣಿಕೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಕೈಗೊಂಡು, ನಿಯಂತ್ರಣಕ್ಕೆ ತರಬೇಕು’ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿ.ಪಂ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಡಿತರ ಧಾನ್ಯಗಳನ್ನು ಮಾರಾಟ ಮಾಡುವಂತಿಲ್ಲ. ಅಕ್ರಮ ದಾಸ್ತಾನಿಗೂ ಅವಕಾಶವಿಲ್ಲ. ಆದರೂ ಜಿಲ್ಲೆಯ ವಿವಿಧೆಡೆ ಪಡಿತರ ಅಕ್ಕಿಯನ್ನು ಅಕ್ರಮ ದಾಸ್ತಾನು ಹಾಗೂ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಿವೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

‘ನ್ಯಾಯಬೆಲೆ ಅಂಗಡಿಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಆಹಾರ ಸಾಮಗ್ರಿಗಳ ವಿತರಣೆಗೂ ಮುನ್ನ ಗುಣಮಟ್ಟದ ಪರಿಶೀಲನೆ ಅವಶ್ಯವಾಗಿ ನಡೆಯಬೇಕು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ವ್ಯವಸ್ಥೆಯನ್ನು ಪರಿಶೀಲಿಸಿ, ಅಕ್ರಮಕ್ಕೆ ಕಡಿವಾಣ ಹಾಕುವ ಕೆಲಸ ಮಾಡಬೇಕಾಗಿದೆ’ ಎಂದು ಹೇಳಿದರು.

‘ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಿಡಿಪಿಒ ಕಚೇರಿಯಲ್ಲಿ ಫಲಾನುಭವಿಗಳಿಗೆ ಸೂಕ್ತ ಸ್ಪಂದನೆ ಹಾಗೂ ಮಾಹಿತಿ ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಅಧಿಕಾರಿಗಳು ಸುಧಾರಿಸಿಕೊಂಡು ಕೆಲಸ ಮಾಡಬೇಕು. ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದರೆ ಇತ್ಯರ್ಥಗೊಳಿಸುವುದು ಸೇರಿದಂತೆ ವಿವಿಧ ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸಲು ಮುಂದಾಗಬೇಕು’ ಎಂದು ಹೇಳಿದರು.

‘ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಗ್ರಾ.ಪಂ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚು ಸಕ್ರಿಯವಾಗಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತ್ಯೇಕ ಸಭೆ ನಡೆಯಬೇಕು. ಮೇ 16 ಮತ್ತು 17ರಂದು ನಡೆಯುವ ಕನಕಗಿರಿ ಉತ್ಸವದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಳಿಗೆಗಳನ್ನು ತೆರೆದು ಜನರಿಗೆ ಹೆಚ್ಚಿನ ಪ್ರಚಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಅನುಷ್ಠಾನಾಧಿಕಾರಿಗಳಿಗೆ ಸೂಚಿಸಿದರು.

ಜಿ.ಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ‘ಅರ್ಜಿ ಹಾಕಿದ ಫಲಾನುಭವಿಗಳ ಪೈಕಿ ಕೆಲವರಿಗೆ ಗೃಹಲಕ್ಷ್ಮಿ ಯೋಜನೆ ಸಹಾಯಧನ ಸಿಗದಿರುವ ಬಗ್ಗೆ ಸೂಕ್ತ ಕಾರಣ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಬಿ ಖಾದ್ರಿ, ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ. ಮಾತನಾಡಿದರು. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-687738260

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.