ಕೊಪ್ಪಳ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರಿಗೆ ಮೀಸಲಾತಿಯಲ್ಲಿ ಸೂಕ್ತ ನ್ಯಾಯ ದೊರಕುವಂತೆ ಮಾಡಲು ಮತ್ತು ಮೀಸಲಾತಿ ವಿಷಯವನ್ನು ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಸೇರಿಸುವ ಸಲುವಾಗಿ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರೊಂದಿಗೆ ಮೇ 24ರಂದು ಮಧ್ಯಾಹ್ನ 12 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಂವಾದ ಹಮ್ಮಿಕೊಳ್ಳಲಾಗಿದೆ.

ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ಕೆ.ಎನ್. ಪಾಟೀಲ, ಮಾಜಿ ಅಧ್ಯಕ್ಷ ಟಿ.ರತ್ನಾಕರ ಕುಕನೂರು, ವಾಲ್ಮೀಕಿ ಗುರುಪೀಠದ ರಾಮಣ್ಣ ಕಲ್ಲನವರ, ಕಾರಟಗಿ ತಾಲ್ಲೂಕಿನ ಧರ್ಮದರ್ಶಿ ಗದ್ದೆಪ್ಪ ನಾಯಕ ಹಾಗೂ ಕಾರಟಗಿಯ ಶಿವರೆಡ್ಡಿ ನಾಯಕ ಅವರು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ‘ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ಹಾಗೂ ಮೀಸಲಾತಿಗೆ ಕಾನೂನಾತ್ಮಕ ಭದ್ರತೆ ಒದಗಿಸಲು ಅದನ್ನು 9ನೇ ಶೆಡ್ಯೂಲ್ಗೆ ಸೇರಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ಕಾನೂನು ಹೋರಾಟದ ಬಗ್ಗೆ ಸಂವಾದದಲ್ಲಿ ಚರ್ಚಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲೆಯ ಸಮುದಾಯಗಳ ಮುಖಂಡರು, ಯುವಜನರು ಸಂವಾದದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ. ಎಸ್.ಟಿ. ಒಳಮೀಸಲಾತಿ ಆಂದೋಲ ನದ ರಾಜ್ಯ ಸಂಚಾಲಕ ಮಂಜುನಾಥ ಗೊಂಡಬಾಳ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-727610753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.