ಯಲಬುರ್ಗಾ: ಮೇ 24ರಂದು ಕೊಪ್ಪಳದಲ್ಲಿ ನಡೆಯಲಿರುವ ಚಿಂತನ ಮಂಥನ ಕಾರ್ಯಕ್ರಮಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ರಾಯಚೂರು ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.

ಪಟ್ಟಣದಲ್ಲಿ ಕಾರ್ಯಕ್ರಮ ಕುರಿತು ಆಯೋಜಿಸಿದ್ದ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮಾಜಿ ಲೋಕಸಭೆ ಸದಸ್ಯ ವಿ.ಎಸ್.ಉಗ್ರಪ್ಪನವರು ಭಾಗವಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲಾತಿ ವಿಚಾರವಾಗಿ ಚಿಂತನಾ ಕಾರ್ಯಕ್ರಮ ಮಾತನಾಡಲಿದ್ದಾರೆ ಎಂದರು.

ಕೊಪ್ಪಳ ಜಿಲ್ಲೆಯ ವಾಲ್ಮೀಕಿ ನಾಯಕ ಸಮಾಜದ ಸಮಾನ ಮನಸ್ಕಾರ ವೇದಿಕೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಸಮುದಾಯದವರಿಗೆ ಶೇ 56 ಮೀಸಲಾತಿಯನ್ನು ನೈನ್ ಶೆಡ್ಯೂಲ್ಗೆ ಸೇರಿಸುವುದಕ್ಕೂ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುತ್ತದೆ. ಈ ಸಂಬಂಧ ಮಧ್ಯಾಹ್ನ 12ಗಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ. ಬಳಿಕ ಮಧ್ಯಾಹ್ನ 12.30 ಗಂಟೆಗೆ ಬಹಿರಂಗ ಸಭೆ ಹಾಗೂ ಚಿಂತನಾ ಮಂಥನ ಜರುಗಲಿದೆ ಎಂದರು.

ಪ.ಪಂ ಮಾಜಿ ಸದಸ್ಯ ಕಳಕಪ್ಪ ತಳವಾರ, ಸಂಘದ ಉಪಾಧ್ಯಕ್ಷ ನಾಗೇಂದ್ರ ನಾಯಕ, ಮುದುಕಪ್ಪ ಆಡಿನ್, ಲಕ್ಷ್ಮಣ್ ಕುಲಕರ್ಣಿ, ರಾಮಣ್ಣ ತಳವಾರ, ಭೀಮಪ್ಪ ಹವಳಿ, ರಾಮಣ್ಣ ಮಾಲಿ, ಶರಣು ಆಡಿನ್, ದೇವಪ್ಪ ಮುದೆನೂರ್, ಮಾದೇವಪ್ಪ ಮುರಾರಿ ಕನಕಪ್ಪ ವಾಲ್ಮೀಕಿ, ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-1496391874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.