ಕೊಪ್ಪಳ: ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರಿಗೆ ಮೀಸಲಾತಿಯಲ್ಲಿ ಸೂಕ್ತ ನ್ಯಾಯ ದೊರಕುವಂತೆ ಮಾಡಬೇಕು, ಮೀಸಲಾತಿ ವಿಷಯವನ್ನು ಸಂವಿಧಾನದ 9ನೇ ಶೆಡ್ಯೂಲ್ನಲ್ಲಿ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು.

ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಈ ವಿಷಯವಾಗಿ ಚರ್ಚಿಸಲು ಮುಖ್ಯಮಂತ್ರಿ ತಕ್ಷಣವೇ ಸರ್ವಪಕ್ಷಗಳ ಸಭೆ ಕರೆಯಬೇಕು, ಪ್ರಧಾನಿ ಬಳಿ ಸರ್ವಪಕ್ಷಗಳ ನಿಯೋಗ ಕೊಂಡೊಯ್ಯಬೇಕು, ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಸಮರ್ಥ ವಕೀಲರನ್ನು ನೇಮಿಸಬೇಕು. ಒಂದು ವೇಳೆ ತಡೆಯಾಜ್ಞೆ ತೆರವಾಗದಿದ್ದರೆ ತಕ್ಷಣವೇ ಸುಪ್ರೀಂಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ದಾಖಲಿಸಬೇಕು, ಎಸ್ಸಿಎಸ್ಟಿ, ಒಬಿಸಿ ವರ್ಗದ ಜನಪ್ರತಿನಿಧಿಗಳು ಮತ್ತು ಕಾನೂನು ತಜ್ಞರ ತುರ್ತು ಸಭೆ ಕರೆದು ಚರ್ಚಿಸಬೇಕು ಎಂದು ಆಗ್ರಹಿಸಲಾಯಿತು.

ಅಶೋಕ ವೃತ್ತದಲ್ಲಿ ಆಗಮಿಸಿದ ಸಮುದಾಯಗಳ ಮುಖಂಡರು ಸಹಾಯಕ ಆಯುಕ್ತ ಕ್ಯಾ. ಮಹೇಶ ಮಾಲಗಿತ್ತಿ ಅವರಿಗೆ ಮನವಿ ಸಲ್ಲಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಅವರು ಮಾತನಾಡಿ ‘ಮೀಸಲಾತಿ ಭಿಕ್ಷೆಯಲ್ಲ, ಜನಪ್ರತಿನಿಧಿಗಳಿಳಿಗೆ ಮತ ಹಾಕಿರುವುದು ಭಿಕ್ಷೆ. ಜನಪ್ರತಿನಿಧಿಗಳು ಈ ವರ್ಗದವರ ಋಣ ತೀರಿಸುತ್ತಿಲ್ಲ. ಜಿಲ್ಲೆಯ ಶಾಸಕ ಬಸವರಾಜ ರಾಯರಡ್ಡಿ, ಸಚಿವ ಶಿವರಾಜ ತಂಗಡಗಿ ನಾಲ್ಕು ಕೋಟಿ ಜನರ ಪರ ಧ್ವನಿ ಎತ್ತುತ್ತಿಲ್ಲ’ ಎಂದರು.

ಲಿಂಗಸೂರಿನ ಗೌಲಪಲ್ಲಿಯ ವರದಾನೇಶ್ವರ ಸ್ವಾಮೀಜಿ, ವಾಲ್ಮೀಕಿ ಮಹಾಸಭಾ ಜಿಲ್ಲಾಧ್ಯಕ್ಷ ಕೆ.ಎನ್. ಪಾಟೀಲ, ಮಾಜಿ ಅಧ್ಯಕ್ಷ ಟಿ. ರತ್ನಾಕರ ಕುಕನೂರು, ವಾಲ್ಮೀಕಿ ಗುರುಪೀಠದ ರಾಮಣ್ಣ ಕಲ್ಲನವರ, ಮುಖಂಡರಾದ ಗದ್ದೆಪ್ಪ ನಾಯಕ, ಶಿವರೆಡ್ಡಿ ನಾಯಕ, ತುಳಸಿರಾಮ ಬೆಂಗಳೂರು, ಮಂಜುನಾಥ ಜಿ. ಗೊಂಡಬಾಳ, ಹನುಮೇಶ ನಾಯಕ, ಶಿವರಡ್ಡಿ ಕಾರಟಗಿ, ಮಾಲತಿ ನಾಯಕ, ಜ್ಯೋತಿ ಎಂ. ಗೊಂಡಬಾಳ, ಮಂಗಳೇಶ ಕುಕನೂರ, ಮಾನಪ್ಪ ಪೂಜಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-35-669904104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.