ಕೊಪ್ಪಳ: ಮೇ ಸಾಹಿತ್ಯ ಮೇಳ ಕೊಪ್ಪಳ ಬಳಗ, ಮಾನವ ಬಂದುತ್ವ ವೇದಿಕೆ, ದಲಿತ ಸಂಘಟನೆಗಳು, ಅಲ್ಪಸಂಖ್ಯಾತರ ಸಂಘಟನೆಗಳು, ವಿವಿಧ ಪ್ರಗತಿಪರ, ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 2ರಂದು ಮಧ್ಯಾಹ್ನ 3.30ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಎಸ್ಐಆರ್ ವಿರೋಧಿಸಿ ಎಸ್ಐಆರ್ ಜಾಗೃತಿ ಕಾರ್ಯಕ್ರಮ ಜರುಗಲಿದೆ ಎಂದು ಹಿರಿಯ ಮುಖಂಡ ಟಿ. ರತ್ನಾಕರ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ಚಿಂತಕ ಶಿವಸುಂದರ್ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಲೇಖಕ ಕುಂ. ವೀರಭದ್ರಪ್ಪ ಮಾತನಾಡಲಿದ್ದಾರೆ. ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದು, ವಿಶೇಷ ಮತದಾರರ ಪರಿಷ್ಕರಣೆ ಹೆಸರಿನಲ್ಲಿ ಮತದಾರರನ್ನು ಹೊರಗಿಡುವ ಕೆಲಸ ನಡೆಯುತ್ತಿದೆ, ಇದರ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಎಸ್ಐಆರ್ ಕರ್ನಾಟಕದಲ್ಲಿಯು ಬರಬಹುದು. ಹೀಗಾಗಿ ಎಸ್ಐಆರ್ ಪ್ರಕ್ರಿಯೆ ವಿರೋಧಿಸಿ ಜನಾಂದೋಲನ ರೂಪಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮತಪಟ್ಟಿಯ ಮೂಲಕ ಪೌರತ್ವವನ್ನು ನಿರಾಕರಿಸುವಂತಹ ಕೆಲಸ ನಡೆಯುತ್ತಿದೆ, ಅದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದರು.

ಹಿರಿಯ ದಲಿತ ಮುಖಂಡ ಶುಕ್ರಾಜ್ ತಾಳಕೇರಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ (ಡಬ್ಲ್ಯೂ.ಪಿ.ಐ)ದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಬಿಹಾ ಎ.ಪಟೇಲ್, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ, ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ. ಗಫಾರ್, ಮಾನವ ಬಂಧುತ್ವ ವೇದಿಕೆಯ ವಿಭಾಗಿಯ ಸಂಚಾಲಕ ಭೀಮಣ್ಣ ಹವಳೆ, ರಂಗಕರ್ಮಿ ಶರಣು ಶೆಟ್ಟರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-35-2001499018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.