ಕನಕಗಿರಿ: ಹಾವು ಕಡಿತದಿಂದ ಉಂಟಾಗುವ ಮರಣವನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ದೇವಮ್ಮ ತಿಳಿಸಿದರು.

ತಾಲ್ಲೂಕಿನ ಮುಸಲಾಪುರ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ನಡೆದ ‘ಹಾವು ಹಾಗೂ ನಾಯಿ ಕಡಿತ ನಿಯಂತ್ರಣ ರಾಷ್ಟ್ರೀಯ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ನಾಗರಹಾವು, ಕಟ್ಟಾವು, ಕೊಳಕುಮಂಡಲ ಹಾವು ಹಾಗೂ ಗರಗಸ ಮಂಡಲ ಹಾವು ವಿಷಕಾರಿಗಳಾಗಿವೆ. ಹಾವು ಕಡಿತದಿಂದ ಉಂಟಾಗುವ ಸಾವುಗಳಲ್ಲಿ ಶೇ 90ರಷ್ಟು ಅಧಿಕ ಸಾವುಗಳು ಈ ನಾಲ್ಕು ಹಾವುಗಳಿಂದ ಸಂಭವಿಸುತ್ತಿವೆ. ಹೀಗಾಗಿ ಈ 4 ಹಾವುಗಳ ಬಗ್ಗೆ ಜನರು ಸದಾ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

‘ಹಾವುಗಳಿರುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಕೆಲಸ ಮಾಡುವಾಗ ಶೂಗಳನ್ನು ಬಳಕೆ ಮಾಡಬೇಕು. ರಾತ್ರಿ ಮನೆಯ ಹೊರಗೆ ಹಾಗೂ ಹೊಲಗದ್ದೆಗಳಲ್ಲಿ ಮಲಗಬೇಕಾದಾಗ ನೆಲದಲ್ಲಿ ಮಲಗದೆ ಎತ್ತರ ಪ್ರದೇಶದ ಮಂಚ ಬಳಸಬೇಕು. ನೆಲದಲ್ಲಿ ಮಲಗಲು ಬಯಸಿದರೆ ಕಡ್ಡಾಯವಾಗಿ ಸೊಳ್ಳೆಪರದೆ ಬಳಸಬೇಕು’ ಎಂದು ಸಲಹೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಂಜುಮತಾಜ್ ಮಾತನಾಡಿ, ‘ಸೋಂಕಿತ ಪ್ರಾಣಿಗಳು ಮನುಷ್ಯರಿಗೆ ಕಚ್ಚುವುದರಿಂದ ರೇಬಿಸ್ ವೈರಸ್ ಹರಡುತ್ತದೆ. ಒಂದು ವೇಳೆ ನಾಯಿ ಕಚ್ಚಿದರೆ, ಕಚ್ಚಿದ ಜಾಗವನ್ನು ಸೋಪು ಮತ್ತು ಶುದ್ದ ಹರಿಯುವ ನಲ್ಲಿ(ನಳ) ನೀರಿನಲ್ಲಿ 15 ನಿಮಿಷ ತೊಳೆಯಬೇಕು. ಕಚ್ಚಿದ ಜಾಗಕ್ಕೆ ಸ್ಥಳೀಯ ವಾಗಿ ಲಭ್ಯವಿರುವ ನಂಜು ನಿರೋಧಕ ಔಷಧ ಲಭ್ಯವಿದ್ದರೆ ಹಚ್ಚಬೇಕು’ ಎಂದರು.

‘ಕಚ್ಚಿದ ಜಾಗವನ್ನು ಬ್ಯಾಂಡೇಜ್, ಯಾವುದೇ ರೀತಿಯ ಬಟ್ಟೆಯಿಂದ ಮುಚ್ಚಬೇಡಿ. ಕಚ್ಚಿದ ಜಾಗಕ್ಕೆ ಕೆಸರು, ಹಸುವಿನ ಸಗಣಿ, ಕಾಫಿಪುಡಿ, ಮೆಣಸಿನಪುಡಿ, ಸುಣ್ಣ ಇತರೆ ಯಾವುದೇ ಕಿರಿ-ಕಿರಿ ಉಂಟುಮಾಡುವ ಪದಾರ್ಥ ಹಚ್ಚಬೇಡಿ. ಎಲ್ಲಾ ನಾಯಿಗಳಿಗೆ ಪಶು ಸಂಗೋಪನಾ ಇಲಾಖೆಯಿಂದ ನೀಡುವ ಚುಚ್ಚುಮದ್ದನ್ನು ತಪ್ಪದೇ ಹಾಕಿಸಬೇಕು’ ಎಂದು ಹೇಳಿದರು.

ಪ್ರಥಮ ದರ್ಜೆ ಸಹಾಯಕ ವಿರೂಪಾಕ್ಷಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಾಸ್ಮಿನ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-35-86677384

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.