ಕೊಪ್ಪಳ: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ಮೇ 7ರಿಂದ 10ರ ತನಕ ಇಲ್ಲಿನ ಮಳೆಮಲ್ಲೇಶ್ವರ ದೇವಸ್ಥಾನದ ಬಯಲು ರಂಗಮಂದಿರದಲ್ಲಿ ಜಿಲ್ಲಾ ಸಾಂಸ್ಕೃತಿಕ ಪ್ರವಾಸೋದ್ಯಮ ಸಪ್ತಾಹ ಹಮ್ಮಿಕೊಂಡಿದೆ.

ಟ್ರಸ್ಟ್ ಅಧ್ಯಕ್ಷ ರಮೇಶ ಸುರ್ವೆ, ಸಂಘಟಕರಾದ ಮಂಜುನಾಥ ಗೊಂಡಬಾಳ ಹಾಗೂ ಉಮೇಶ ಸುರ್ವೆ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ಪ್ರವಾಸೋದ್ಯಮ ಸಪ್ತಾಹದ ಜೊತೆಗೆ ಅಖಿಲ ಕರ್ನಾಟಕ ಮಕ್ಕಳ ಸಾಹಿತ್ಯ ಮತ್ತು ಸಾಂಸ್ಕೃತಿಕ 12ನೇ ಸಮ್ಮೇಳನ, 75ನೇ ಸಾಂಸ್ಕೃತಿಕ ಕಲಾ ಪ್ರತಿಭೋತ್ಸವ ಕೂಡ ಹಮ್ಮಿಕೊಳ್ಳಲಾಗಿದೆ. ಬಿಸರಳ್ಳಿಯ ಸಾಹಿತಿ ಮಲ್ಲಿಕಾರ್ಜುನ ಹಿರೇಮಠ ಅಧ್ಯಕ್ಷತೆಯಲ್ಲಿ ಸಪ್ತಾಹ ನಡೆಯಲಿದ್ದು, ವಿವಿಧ ವಿಷಯಗಳು ಕುರಿತು ನಡೆಯುವ ವಿಚಾರ ಸಂಕಿರಣದಲ್ಲಿ ತಜ್ಞರು ವಿಷಯ ಮಂಡನೆ ಮಾಡಲಿದ್ದಾರೆ’ ಎಂದು ತಿಳಿಸಿದರು.

ಜಿಲ್ಲೆಯ ಪ್ರವಾಸೋದ್ಯಮದ ಮೇಲೆ ಕಾರ್ಖಾನೆಗಳ ಕರಿನೆರಳು, ಪ್ರವಾಸೋದ್ಯಮಕ್ಕೆ ರಾಜಮನೆತನಗಳ ಕೊಡುಗೆ, ಪ್ರವಾಸೋದ್ಯಮಕ್ಕೆ ಕೊಡುಗೆ ನೀಡಿದ ಧರ್ಮಗಳು ಹಾಗೂ ಜಿಲ್ಲಾ ಪ್ರವಾಸಙೋದ್ಯಮ ಹಾಗೂ ಮೂಲ ಸೌಕರ್ಯಗಳು ಹೀಗೆ ವಿವಿಧ ವಿಷಯಗಳ ಕುರಿತು ವಿಚಾರ ಸಂಕಿರಣ ಜರುಗಲಿದೆ. ಪ್ರವಾಸೋದ್ಯಮದ ಕುರಿತು 16 ಉಪನ್ಯಾಸಗಳು, ಸಾಹಿತಿಗಳೊಂದಿಗೆ ಸಂಬಾದ, ಕವನ ವಾಚನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-35-2036671489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.