ಕೊಪ್ಪಳ: ಮೇ 28ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತ ಜಾನುವಾರುಗಳ ವಧೆ ಹಾಗೂ ಜಾನುವಾರುಗಳ ಸಾಗಣೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಈ ಕುರಿತು ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಮತ್ತು ಸಂರಕ್ಷಣೆ ಅಧಿನಿಯಮ-2020ರ ಅನ್ವಯ ಗೋ ಹತ್ಯೆ ನಿಷೇಧಿಸಲಾಗಿದೆ. ಎಲ್ಲಾ ವಯಸ್ಸಿನ ಆಕಳು, ಆಕಳು ಕರು, ಹೋರಿ, ಗೂಳಿ ಮತ್ತು 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳ ಹತ್ಯೆ ನಿಷೇಧಿಸಲಾಗಿದೆ. ಹದಿಮೂರು ವರ್ಷ ಮೇಲ್ಪಟ್ಟ ಎಮ್ಮೆ ಅಥವಾ ಕೋಣವನ್ನು ಸಕ್ಷಮ ಪ್ರಾಧಿಕಾರಿಯ ಶಿಫಾರಸ್ಸಿನ ಮೇರೆಗೆ ವಧೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ ಮಾತನಾಡಿ ‘ರಾಜ್ಯ ಹಾಗೂ ಕೇಂದ್ರ ಸರ್ಕಾರವು ನಿಯಮಿಸಿದ ವಿಧಾನದಲ್ಲಿ ಕೃಷಿ ಅಥವಾ ಪಶುಸಂಗೋಪನೆಯ ಉದ್ದೇಶಕ್ಕಾಗಿ ಸಕ್ಷಮ ಪ್ರಾಧಿಕಾರಿಯ ಪರವಾನಗಿ ಪಡೆದು ಜಾನುವಾರು ಸಾಗಣೆ ಮಾಡಬೇಕು. ಅಪರಾಧ ಸಾಬೀತಾದಲ್ಲಿ ಮೂರರಿಂದ ಏಳು ವರ್ಷದವರೆಗೆ ಕಾರಗೃಹ ವಾಸ ಅಥವಾ ಒಂದು ಜಾನುವಾರಿಗೆ ₹50 ಸಾವಿರದಿಂದ ₹5 ಲಕ್ಷಗಳವರೆಗೆ ದಂಡ ಹಾಕಲು ಅವಕಾಶವಿದೆ‘ ಎಂದು ತಿಳಿಸಿದರು.

ಬಕ್ರೀದ್ ಸಂದರ್ಭದಲ್ಲಿ ಅನಧಿಕೃತ ಜಾನುವಾರುಗಳ ಸಾಗಾಟದ ಮೇಲೆ ನಿಗಾವಹಿಸಲು ಪಶು ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಹಯೋಗದಲ್ಲಿ ತಂಡಗಳನ್ನು ರಚಿಸಿ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ 16 ಕಡೆಗಳಲ್ಲಿ ಚೆಕ್ಪೋಸ್ಟ್ ಮಾಡಲಾಗುತ್ತದೆ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇ ಶಕ ಡಾ. ಪಿ.ಎಂ.ಮಲ್ಲಯ್ಯ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲೆಯ ವಿವಿಧ ತಾಲ್ಲೂಕಿನ ಪಶುವೈದ್ಯಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-35-1074003323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.