ಕೊಪ್ಪಳ: ಸುಪ್ರೀಂಕೋರ್ಟ್ ಆದೇಶದ ಅನ್ವಯ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಸ್ತು ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ಸಂಸ್ಕರಿಸದವರಿಗೆ ನೀರು ಹಾಗೂ ವಿದ್ಯುತ್ ಸ್ಥಗಿತಗೊಳಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಘನ ತ್ಯಾಜ್ಯ ವಸ್ತುಗಳ ನಿರ್ವಹಣಾ ನಿಯಮಗಳು ಇತ್ತೀಚೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,‘ಘನ ತ್ಯಾಜ್ಯ ವಸ್ತುಗಳ ನಿರ್ವಹಣೆಯ 2026ರ ಹೊಸ ನಿಯಮಾವಳಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸಬೇಕು. ಈ ಬಗ್ಗೆ ನಾಗರಿಕರಿಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು. ಸ್ವಚ್ಛ ಮತ್ತು ಆರೋಗ್ಯ ಪರಿಸರ ರೂಪಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಘನ ತ್ಯಾಜ್ಯ ಸಮರ್ಪಕವಾಗಿ ವಿಲೇವಾರಿ ಮತ್ತು ನಿರ್ವಹಣೆ ಮಾಡದಿರುವುದು ಪರಿಸರ ಹಾಗೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹಾಗಾಗಿ ಘನ ತ್ಯಾಜ್ಯ ಸಮರ್ಪಕವಾಗಿ ವಿಲೇವಾರಿ ಮಾಡಲು ಸೂಕ್ತ ಕ್ರಮವಹಿಸಬೇಕು’ ಎಂದು ಸೂಚಿಸಿದರು.

ನೂತನ ನಿಯಮಾವಳಿಗಳನ್ನು ಉಲ್ಲಂಘನೆ ಮಾಡುವ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳ ವಿರುದ್ಧ ಕಡ್ಡಾಯವಾಗಿ ದಂಡ ವಿಧಿಸಬೇಕು. ಅಂಥ ವ್ಯಕ್ತಿ ಅಥವಾ ಸಂಘ-ಸಂಸ್ಥೆಗಳಿಗೆ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಕ್ರಮವಹಿಸಿ. ಪ್ರತಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಛತೆಗಾಗಿ ನಿಯಮಿತವಾಗಿ ಬ್ಲಾಕ್ ಸ್ಪಾಟ್ಗಳನ್ನು ಕಾಲಕಾಲಕ್ಕೆ ತೆರವುಳಿಸಲು ಕಟ್ಟುನಿಟ್ಟಿನ ನಿರ್ದೇಶನ ಕೊಟ್ಟರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಡಿಎಚ್ಒ ಡಾ. ಟಿ.ಲಿಂಗರಾಜು, ಡಿಡಿಪಿಐ ಸೋಮಶೇಖರಗೌಡ ಪಾಟೀಲ, ಡಿಡಿಪಿಯು ಜಗದೀಶ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-35-276934484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.