ಕೊಪ್ಪಳ: ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಹೂಡಲು ರಾಜ್ಯವ್ಯಾಪಿ ಆಂದೋಲನದ ಸಮಾರೋಪ ಕಾರ್ಯಕ್ರಮದ ಭಾಗವಾಗಿ ಬುಧವಾರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಐಎಂಎಸ್ಎಸ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಯಿತು.

ಎಐಎಂಎಸ್ಎಸ್ ಸಂಘಟನೆ ಜಿಲ್ಲಾಧ್ಯಕ್ಷೆ ಮಂಜುಳಾ ಮಜ್ಜಿಗಿ ಮಾತನಾಡಿ ‘ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ರಾಜ್ಯ ಸಮಿತಿಯು 2025ರ ನವೆಂಬರ್ 25ರಿಂದ ಮಾರ್ಚ್ 25ರ ತನಕ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ಸಮರ ಹೂಡಲು ಆಂದೋಲನ ನಡೆಸಲಾಗಿತ್ತು. ಹೋರಾಟಕ್ಕೆ ರಾಜ್ಯದ ಅನೇಕರು ಸ್ಪಂದಿಸಿದ್ದಾರೆ’ ಎಂದರು.

ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಖಾತ್ರಿಪಡಿಸಬೇಕು, ಸ್ತ್ರೀಭ್ರೂಣ ಹತ್ಯೆ, ಬಾಲ್ಯ ವಿವಾಹ, ವಯಸ್ಕರ ಗರ್ಭಧಾರಣೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು, ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಕಡೆ ತೀವ್ರತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-35-1502904756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.