ಕೊಪ್ಪಳ: ಹುಲಿಗೆಮ್ಮ ದೇವಿ ಜಾತ್ರೆಗೆ ಬಂದಿದ್ದ ಕುಷ್ಟಗಿ ತಾಲ್ಲೂಕಿನ ನೀರಲಕೊಪ್ಪ ಗ್ರಾಮದ ಅಶೋಕ ತಂದೆ ದ್ಯಾಮನಗೌಡ್ರು(25) ಎನ್ನುವ ಯುವಕ ತುಂಗಭದ್ರಾ ನದಿಯಲ್ಲಿ ಮುಳುಗಿ ಸೋಮವಾರ ಮೃತಪಟ್ಟಿದ್ದಾನೆ.

ಜಾತ್ರೆಯ ಅಂಗವಾಗಿ ನದಿಗೆ ಅಲ್ಪಪ್ರಮಾಣದಲ್ಲಿ ನೀರು ಹರಿಸಲಾಗಿತ್ತು. ಅಲ್ಲಿ ಸಾಕಷ್ಟು ಭಕ್ತರು ಸ್ನಾನ ಮಾಡಿದ್ದರು. ಅಲ್ಲಿಗೆ ತೆರಳಿದ್ದ ಅಶೋಕ ಸ್ನಾನಕ್ಕೆಂದು ತೆರಳಿದ್ದಾಗ ಮುಳುಗಿದ್ದಾನೆ. ಅಲ್ಲಿಯೇ ಇದ್ದ ಇನ್ನಷ್ಟು ಜನ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದು, ಸಾಕಷ್ಟು ಪ್ರಮಾಣದಲ್ಲಿ ನೀರು ದೇಹದೊಳಗೆ ಹೋಗಿತ್ತು. ಪೊಲೀಸ್ ಸಿಬ್ಬಂದಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-35-309692350

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.