ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಶಾನ ಕಾರ್ಮಿಕರ ನೇಮಕ್ಕೆ ಒತ್ತಾಯಿಸಿ ಪ್ರತಿಭಟನೆ

Published 15 ಫೆಬ್ರುವರಿ 2024, 16:22 IST
Last Updated 15 ಫೆಬ್ರುವರಿ 2024, 16:22 IST
ಅಕ್ಷರ ಗಾತ್ರ

ಗಂಗಾವತಿ: ನಗರ ಮತ್ತು ಗ್ರಾಮೀಣ ಭಾಗದಲ್ಲಿನ ಸ್ಮಶಾನಕ್ಕೆ ಕಾರ್ಮಿಕರನ್ನ ನೇಮಿಸಬೇಕೆಂದು ಒತ್ತಾಯಿಸಿ, ರಾಜ್ಯ ಮಸಣ ಕಾರ್ಮಿಕರ ಸಂಘಟನೆ ಸದಸ್ಯರು ಕೃಷ್ಣದೇವರಾಯ ವೃತ್ತದಲ್ಲಿ ಈಚೆಗೆ ಪ್ರತಿಭಟನೆ ನಡೆಸಿದರು.

ಸಂಘಟನೆ ತಾಲ್ಲೂಕು ಸಂಚಾಲಕ ಶಿವಣ್ಣ ಬೆಣಕಲ್ ಮಾತನಾಡಿ, ಹಲವು ವರ್ಷಗಳಿಂದ ಸ್ಮಶಾನದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕಾರ್ಮಿಕರು ಸಂಘಟಿತರಾಗಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬರುತ್ತಿದ್ದು, ಫಲಿತಾಂಶ ಸಿಕ್ಕಿಲ್ಲ ಎಂದರು.

45 ವರ್ಷ ಮೇಲ್ಪಟ್ಟ ಎಲ್ಲ ಕಾರ್ಮಿಕರಿಗೆ ಮಾಸಿಕ ಸಹಾಯಧನ ₹3 ಸಾವಿರ ನೀಡಬೇಕು. ಎಲ್ಲ ಮಸಣ ಕಾರ್ಮಿಕರ ಕುಟುಂಬಗಳಿಗೆ ಕಡ್ಡಾಯವಾಗಿ ಉದ್ಯೋಗ ಖಾತರಿ ಯೋಜನೆಯಡಿ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಇಲ್ಲವಾದಲ್ಲಿ ಶೇ.75ರಷ್ಟು ನಿರುದ್ಯೋಗ ಭತ್ಯೆ ನೀಡಬೇಕು ಎಂದರು. ಗಾದೆಪ್ಪ ಬೆಣಕಲ್, ಶ್ರೀನಿವಾಸ್ ಹೊಸಳ್ಳಿ, ಮುತ್ತಣ್ಣ ದಾಸನಾಳ, ಅಂಜಿನಪ್ಪ, ಶಿವಲಿಂಗಪ್ಪ, ಬಸವರಾಜ ಆನೆಗೊಂದಿ, ಮರಿಯಪ್ಪ, ಶೇಖರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT