ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪಳ; ಗಣಪತಿ ವಿಸರ್ಜನೆ ಮೆರವಣಿಗೆ ಮುಗಿಸಿ ವಾಪಸ್ ಹೋಗುವಾಗ ಅಪಘಾತ: ಯುವಕ ಸಾವು

Published : 24 ಸೆಪ್ಟೆಂಬರ್ 2024, 7:31 IST
Last Updated : 24 ಸೆಪ್ಟೆಂಬರ್ 2024, 7:31 IST
ಫಾಲೋ ಮಾಡಿ
Comments

ಗಂಗಾವತಿ: ಗಣೇಶ ಮೂರ್ತಿ ವಿಸರ್ಜನೆ ಮಾಡಿ ಮನೆಗೆ ವಾಪಸ್ ಹೋಗುವಾಗ ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ.

ಕೊಪ್ಪಳ ತಾಲ್ಲೂಕಿನ ಹುಲಿಗಿ ಸಮೀಪದ ಶಿವಪುರ ಗ್ರಾಮದ ನವೀನ್ ಕುಮಾರ್ (27) ಮೃತಪಟ್ಟವರು.

ಗಂಗಾವತಿ ನಗರದ ಉಪ್ಪಾರ ಓಣಿಯ ಭಗೀರಥ ವೃತ್ತದಲ್ಲಿ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿ ಯುವಕ ಬೈಕ್ ಮೇಲೆ ಹೋಗುವಾಗ ಎದುರಿಗೆ ಬಂದ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಈ ಅವಘಡ ಜರುಗಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT