ಕೊಪ್ಪಳ: ‘ಉದ್ಯೋಗಾಕಾಂಕ್ಷಿಗಳು ತಮ್ಮ ಶಿಕ್ಷಣದ ಜತೆಗೆ ತಾಂತ್ರಿಕ ಕೌಶಲಗಳಿಗೆ ಆದ್ಯತೆ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಸಹಯೋಗದಲ್ಲಿ ನಡೆದ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿ ‘ಹೆಚ್ಚು ಓದಿಕೊಂಡವರು ಮಾತ್ರ ಬುದ್ದಿವಂತರು ಎಂದು ಒಂದು ಕಾಲದಲ್ಲಿ ಹೇಳಲಾಗುತ್ತಿತ್ತು. ಈಗ ಅದು ಬದಲಾಗಿದೆ. ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾಭ್ಯಾಸ, ಜ್ಞಾನದ ಜೊತೆಗೆ ಕೌಶಲ್ಯ ಮತ್ತು ಮನೋಭಾವ ಬಹಳ ಮುಖ್ಯವಾಗಿದೆ’ ಎಂದರು.

‘ತಂತ್ರಜ್ಞಾನ ಯುಗದಲ್ಲಿ ವಿದ್ಯಾಭ್ಯಾಸದ ಜೊತೆಗೆ ಕೌಶಲ ತರಬೇತಿ ಅತ್ಯವಶ್ಯಕವಾಗಿದ್ದು, ಸರ್ಕಾರಗಳು ಹಲವಾರು ಕೌಶಲ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಯುವಜನತೆ ಇವುಗಳ ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

‘ಭಾರತದ ಪದವಿ ಪೂರ್ಣಗೊಳಿಸಿದವರಲ್ಲಿ ಶೇ 50ರಷ್ಟು ಜನರಿಗೆ ಮಾತ್ರ ಉದ್ಯೋಗ ಸಿಗುತ್ತಿದೆ. ಬಹಳಷ್ಟು ಜನ ನಿರುದ್ಯೋಗಿಗಳಾಗಿ ಉಳಿಯುತ್ತಿದ್ದಾರೆ. ಆದ್ದರಿಂದ ಕೌಶಲ ಬಹುಮುಖ್ಯ. ಜಿಲ್ಲೆಯ ತಳಕಲ್ನಲ್ಲಿ ವಿಟಿಯು ಬಹು ಕೌಶಲ್ಯ ಕೇಂದ್ರವಿದ್ದು ವಿವಿಧ ಕೌಶಲ್ಯ ತರಬೇತಿ ನೀಡಲಾಗುತ್ತಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವೈ.ಬಿ.ಅಂಗಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ, ಕೊಪ್ಪಳ ತಾ.ಪಂ ಇಒ ದುಂಡಪ್ಪ ತುರಾದಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕಮಲರಾಜ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಮಂಜುಳಾ ಉಪ್ಪಾರ, ಕೌಶಲ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಸಿಬ್ಬಂದಿ ಮೌನೇಶ ಸೇರಿ ಅನೇಕರು ಪಾಲ್ಗೊಂಡಿದ್ದರು.

ಮೇಳದಲ್ಲಿ 61ಕ್ಕೂ ಅಧಿಕ ಕಂಪನಿಗಳು ಪಾಲ್ಗೊಂಡಿದ್ದವು. ಉದ್ಯೋಗಕ್ಕಾಗಿ ಎರಡು ಸಾವಿರ ಅಭ್ಯರ್ಥಿಗಳು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದು ಸುಮಾರು 300ಕ್ಕೂ ಹೆಚ್ಚು ಉದ್ಯೋಗದ ಆಕಾಂಕ್ಷಿಗಳು ಭಾಗವಹಿಸಿದ್ದರು.
ಕೆ.ಗವಿಶಂಕರ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.