ಗುರುವಾರ , ಆಗಸ್ಟ್ 6, 2020
24 °C

ಪತಿಯ ಮೇಲಿನ ಕೋಪಕ್ಕೆ ಹೆತ್ತ ಮಗನನ್ನೆ ಕೊಂದ ತಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಪತಿಯ ಮೇಲಿನ ಕೋಪಕ್ಕೆ ಮಹಿಳೆಯೊಬ್ಬರು 16 ತಿಂಗಳ ಮಗನನ್ನು ಉಸಿರುಗಟ್ಟಿಸಿ ಕೊಲೆಗೈದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ನಡೆದಿದೆ. 

ಅಭಿನವ ಮೃತ ಮಗು. ಕವಿತಾ ಅಲಿಯಾಸ್ ಪ್ರತಿಮಾ ಮಗುವನ್ನು ಕೊಂದಾಕೆ. ಬೆಳಿಗ್ಗೆ ಗಂಡ ಕೆಲಸಕ್ಕೆ ತೆರಳಿದಾಗ ಈ ದುಷ್ಕೃತ್ಯ ಎಸಗಿದ್ದಾರೆ. 

ಸಂಜೆ ಪತಿ ಮನೆಗೆ ‌ಬಂದ ಬಳಿಕ ವಿಷಯ ತಿಳಿದು ಬಂದಿದ್ದು, ಕವಿತಾಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಮಹಿಳೆಯ ವಿಚಾರಣೆ ನಡೆಯುತ್ತಿದೆ. 

ಪತಿ ಸರಿಯಾಗಿ ದುಡಿಯುತ್ತಿಲ್ಲ ಎಂಬ ಕಾರಣಕ್ಕೆ ಈ ದುಷ್ಕೃತ್ಯ ಎಸಗಿದ ಕವಿತಾ, ಹಿಂದೆಯೂ ಕೆಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ತಿಳಿದು ಬಂದಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು