ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇವಂಕಲಕುಂಟಾ: ನರೇಗಾ ದಿನಾಚರಣೆ

Published 5 ಫೆಬ್ರುವರಿ 2024, 15:41 IST
Last Updated 5 ಫೆಬ್ರುವರಿ 2024, 15:41 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ನರೇಗಾ ದಿನಾಚರಣೆ ಹಾಗೂ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ  ಆಯೋಜಿಸಲಾಗಿತ್ತು.

ತಾಲ್ಲೂಕು ಪಂಚಾಯಿತಿ, ಹಿರೇವಂಕಲಕುಂಟಾ ಗ್ರಾಮ ಪಂಚಾಯಿತಿ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಇವುಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್‍ಪಾಟೀಲ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ‘ನರೇಗಾ ಯೋಜನೆ ಪ್ರಾರಂಭಗೊಂಡು 15 ವರ್ಷಗಳು ಕಳೆದಿವೆ. ಅನೇಕ ಕುಟುಂಬಗಳ ಆರ್ಥಿಕ ಸುಧಾರಣೆಗೆ ಇದು ಸಹಕಾರಿಯಾಗಿದೆ. ಇಂದಿಗೂ ಅನೇಕ ರೈತರಿಗೆ ಹಾಗೂ ಕೃಷಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸಿಕೊಡುವ ಒಂದು ವರದಾನವಾಗಿದೆ’ ಎಂದರು.

ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿರುವುದರಿಂದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದೆ. ಗ್ರಾಮೀಣ ಜನರ ಉದ್ಯೋಗದ ಬಗ್ಗೆ ಖಾತ್ರಿಯಾಗಿರುವುದರಿಂದ ಗುಳೆ ಹೋಗುವುದನ್ನು ನಿಯಂತ್ರಿಸಿದೆ. ಹೀಗೆ ಹಲವು ರೀತಿಯ ಪ್ರಯೋಜನವಾಗುತ್ತಿರುವ ಖಾತ್ರಿ ಯೋಜನೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುಕೂಲತೆಗಳನ್ನು ಕಲ್ಪಿಸಿಕೊಡಲಿದೆ’ ಎಂದು ಅಭಿಪ್ರಾಯಪಟ್ಟರು.

ತಾ.ಪಂ.ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ ಮಾತನಾಡಿ, ‘ವೈಯಕ್ತಿಕ ಕಾಮಗಾರಿಗಳನ್ನು ಕೈಗೊಂಡು ಜಮೀನು ಅಭಿವೃದ್ಧಿಗೊಳಿಸಿಕೊಳ್ಳಬಹುದಾಗಿದೆ’ ಎಂದರು.

ಇದೇ ವೇಳೆ 100 ಮಾನವ ದಿನಗಳ ಕೆಲಸ ಮಾಡಿದ ಕಾರ್ಮಿಕರನ್ನು ಕಾಯಕ ಸನ್ಮಾನ ಪುರಸ್ಕಾರ ನೀಡಿ ಗೌರವಿಸಲಾಯಿತು. ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಯೋಗಕ್ಷೇಮದ ಬಗ್ಗೆ ವಿಚಾರಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಣೆಪ್ಪ ಜಿರ್ಲಿ, ಸಾಮಾಜಿಕ ಅರಣ್ಯ ಇಲಾಖೆ ಆರ್‌ಎಫ್‍ಒ ಬಸವರಾಜ ಗೋಗೇರಿ, ತಾ.ಪಂ.ತಾಂತ್ರಿಕ ಸಂಯೋಜಕ ಸಂತೋಷ ನಂದಾಪೂರ, ಎಂಐಎಸ್ ಸಂಯೋಜಕ ಬಸವರಾಜ ದೊಡ್ಡಮನಿ, ಗುರುರಾಜ, ಶಾಮಿದ್‍ಸಾಬ ಸೇರಿ ಅನೇಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT